ಉಡುಪಿ,ಆ.21 : ಸಾಮಾಜಿಕ ಕಾರ್ಯಕರ್ತ ಮಹೇಶ್ ಶೆಟ್ಟಿ ತಿಮರೋಡಿಗೆ ಕೋರ್ಟ್ 14 ದಿನಗಳ ನ್ಯಾಯಾಂಗ ಬಂಧನ ವಿಸಿ ಆದೇಶಿಸಿದೆ.ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವ ಹೇಳನಕಾರಿ ಹೇಳಿಕೆ ನೀಡಿದ್ದಕ್ಕೆ ಇಂದು ಉಡುಪಿಯ ಬ್ರಹ್ಮಾವರ ಪೊಲೀಸರು ಉಜಿರೆಗೆ ತೆರಳಿ ನಿವಾಸದಿಂದ ತಿಮರೋಡಿಯನ್ನು ಬಂದಿಸಿದ್ದರು.
ಮಧ್ಯಾಹ್ನ ಮೆಡಿಕಲ್ ಪರೀಕ್ಷೆ ನಡೆಸಿ ಬ್ರಹ್ಮಾವರ ತಾಲೂಕು ಕೋರ್ಟ್‌ಗೆ ಹಾಜರು ಪಡಿಸಿದರು. ಈ ಸಂದರ್ಭದಲ್ಲಿ ತಿಮರೋಡಿ ಪರ ವಕೀಲರು ಸಲ್ಲಿಸಿದ ಜಾಮೀನು ಅರ್ಜಿಯ ವಿಚಾರಣೆ ನಡೆಯಿತು. ಜಾಮೀನು ನೀಡಲು ನಿರಾಕರಿಸಿದ ಕೋರ್ಟ್ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತು. ಮಹೇಶ್ ಶೆಟ್ಟಿಯ ಜಾಮೀನು ಅರ್ಜಿಯ ವಿಚಾರಣೆ ಅಗಸ್ಟ್ 23 ಕ್ಕೆ ನಡೆಯಲಿದೆ.ಕೋರ್ಟ್ ಆದೇಶದ ಹಿನ್ನೆಲೆ ಮಹೇಶ್ ತಿಮರೋಡಿ ಈಗ ಹಿರಿಯಡ್ಕ ಸಬ್ ಜೈಲು ಸೇರಿದ್ದಾರೆ.