ಬೆಂಗಳೂರು,ಸೆ.04 : ಚಿತ್ರದುರ್ಗದ ರೇಣುಕಾಸ್ವಾಮಿ ಅಪಹರಣ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾಲೆಂಜಿಗ್ ಸ್ಟಾರ್ ದರ್ಶನ್,ಗೆಳತಿ ಪವಿತ್ರಗೌಡ ಅವರ ಗ್ಯಾಂಗ್ ವಿರುದ್ಧ 3,991 ಪುಟಗಳ ದೋಷಾರೋಪ ಪಟ್ಟಿಯನ್ನು ಪೊಲೀಸರು ನ್ಯಾಯಾಲಯಕ್ಕೆ ಬುಧವಾರ ಸಲ್ಲಿಕೆ ಮಾಡಿದ್ದಾರೆ.
ಪೊಲೀಸರು 24 ನೇ ಎಸಿಎಂಎಂ ಕೋರ್ಟ್‌ಗೆ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಒಟ್ಟು 17 ಆರೋಪಿಗಳ ವಿರುದ್ಧ 3,991 ಪುಟಗಳ ಚಾರ್ಜ್‌ಶೀಟ್ ಸಲ್ಲಿಕೆ ಮಾಡಿದ್ದಾರೆನ್ನಲಾಗಿದೆ.
ಕಾಮಾಕ್ಷಿಪಾಳ್ಯ ಇನ್‌ಸ್ಪೆಕ್ಟರ್, ರೇಣುಕಾಸ್ವಾಮಿ ಕೊಲೆ ಕೇಸ್ ತನಿಖಾಧಿಕಾರಿ ಎಸಿಪಿ ಚಂದನ್ ಕುಮಾರ್ ನೇತೃತ್ವದಲ್ಲಿ ಕೋರ್ಟ್‌ಗೆ ದೋಷಾರೋಪಣ ಪಟ್ಟಿ ಸಲ್ಲಿಸಿದರು.
ದೋಷಾರೋಪ ಪಟ್ಟಿಯಲ್ಲಿ ಚಾಲೆಂಜಿಗ್ ಸ್ಟಾ ರ್ ದರ್ಶನ್ ಅವರನ್ನು 2 ನೇ ಆರೋಪಿ ಎಂದೇ ದಾಖಲಿಸಲಾಗಿದ್ದು, ಪವಿತ್ರಾ 1 ನೇ ಆರೋಪಿಯಾಗಿದ್ದಾರೆಂದು ಉಲ್ಲೇಖಿಸಲಾಗಿದೆ.
17 ಆರೋಪಿಗಳ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ ಆಗಿದ್ದು, 3 ಪ್ರತ್ಯಕ್ಷ ಸಾಕ್ಷಿಗಳು, ಎಫ್ಎಸ್ಎಲ್ ಮತ್ತು ಸಿಎಫ್ಎಸ್ಎಲ್ ನಿಂದ 8 ವರದಿಗಳಿರುವುದು, ಈ ಪ್ರಕರಣದಲ್ಲಿ ಒಟ್ಟು 231 ಸಾಕ್ಷಿಗಳಿರುವುದಾಗಿ ತಿಳಿಸಲಾಗಿದೆ.
ಪ್ರಕರಣ ತನಿಖೆ ಪೂರ್ಣಗೊಂಡಿಲ್ಲದಿರುವುದರಿಂದ ಸಿಆರ್ ಪಿಸಿ 173 (8) )ಅಡಿಯಲ್ಲಿ ಪ್ರಿಲಿಮಿನರಿ ಚಾರ್ಜ್ ಶೀಟ್ ಸಲ್ಲಿಕೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.