4 ದಿನ ಗುಡುಗು  ಸಹಿತ ಮಳೆ : ಎಚ್ಚರಿಕೆ

Kranti Deepa
ಬೆಂಗಳೂರು,ಆ.11 : ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇಂದು ಮಧ್ಯಾಹ್ನದಿಂದ ಧಾರಾಕಾರ ಮಳೆಯಾಗುತ್ತಿದೆ. ರಾಜ್ಯದಲ್ಲಿ ಅಬ್ಬರಿಸುತ್ತಿರುವ ಆಶ್ಲೇಷ ಮಳೆ ಎಲ್ಲಾ ಕಡೆ ಅಲ್ಲೋಲ ಕಲ್ಲೋಲ ಸೃಷ್ಟಿಸಿದೆ. ಕಳೆದ ಎರಡು ಮೂರು ದಿನದಿಂದ ಬಿಟ್ಟೂ ಬಿಡದೆ ಮಳೆಯಾ ಚಗುತ್ತಿದ್ದು, ಉತ್ತರದ ಜಿಲ್ಲೆಗಳಲ್ಲಂತೂ ನರಕವೇ ಸೃಷ್ಟಿಯಾಗಿದೆ. ಇಷ್ಟು ದಿನ ಶಾಂತವಾಗಿದ್ದ ಹಳ್ಳಕೊಳ್ಳಗಳೆಲ್ಲಾ ಮತ್ತೆ ಹುಚ್ಚೆದ್ದು ಹರಿಯುತ್ತಿವೆ.
ಬೆಂಗಳೂರಿನಲ್ಲಿ ಸುರಿದ ಭಾರೀ ಮಳೆಗೆ ರಸ್ತೆಗಳಲ್ಲೆಲ್ಲಾ ನೀರು ತುಂಬಿಕೊಂಡಿದೆ. ತಗ್ಗು ಪ್ರದೇಶಗಳಲ್ಲಿ ಮನೆಗಳಿಗೆ ನೀರು ನುಗ್ಗಿದೆ. ಶಿವಾಜಿನಗರ, ವಿಧಾನಸೌಧದ ಸುತ್ತ ಮುತ್ತ ಭಾರೀ ಮಳೆಯಾಗುತ್ತಿದೆ. ರಾಜಧಾನಿಯಲ್ಲಿ ಬೆಳಗ್ಗಿ ನಿಂದಲೇ ಮೋಡ ಕವಿದ ವಾತಾವರಣವಿತ್ತು. ಇನ್ನು 3 ಗಂಟೆ ಸುಮಾರಿಗೆ ಮಳೆಯ ಆರ್ಭಟ ಜೋರಾಯಿತು. ಆಗಸ್ಟ್ ೧೫ರವರೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Share This Article
";