4.30 ಲಕ್ಷ  ‘ಗೃಹಲಕ್ಷ್ಮಿ’ ಫಲಾನುಭವಿಗಳ ಡಿಲೀಟ್

Kranti Deepa
ಬೆಂಗಳೂರು,ಜೂ.10 : ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮಿ ಯೋಜನೆಯಲ್ಲಿ ವ್ಯಾಪಕ ಪರಿಶೀಲನೆ ನಡೆಸಿದ ಬಳಿಕ ಸುಮಾರು 4.30 ಲಕ್ಷ ಫಲಾನುಭವಿಗಳ ಹೆಸರುಗಳನ್ನು ಪಟ್ಟಿಯಿಂದ ತೆಗೆದುಹಾಕಲಾಗಿದೆ.
ಮಹಿಳಾ ಕುಟುಂಬ ಮುಖ್ಯಸ್ಥರಿಗೆ ತಿಂಗಳಿಗೆ 2,000 ರೂ ಆರ್ಥಿಕ ನೆರವು ನೀಡುವ ಗೃಹಲಕ್ಷ್ಮಿ ಯೋಜನೆಯಲ್ಲಿ ಅನರ್ಹರು ಸೌಲಭ್ಯ ಪಡೆಯುತ್ತಿರುವ ಬಗ್ಗೆ ದೂರುಗಳು ಬಂದ ಹಿನ್ನೆಲೆಯಲ್ಲಿ ಸರ್ಕಾರ “ಆಪರೇಷನ್ ಗೃಹಲಕ್ಷ್ಮಿ” ಹೆಸರಿನಲ್ಲಿ ವಿಶೇಷ ಪರಿಶೀಲನಾ ಕಾರ್ಯಾಚರಣೆ ಆರಂಭಿಸಿತ್ತು. ಅಕೃತ ಮೂಲಗಳ ಪ್ರಕಾರ, ವಿವಿಧ ಜಿಲ್ಲೆಗಳಲ್ಲಿ ನಡೆದ ಪರಿಶೀಲನೆಯ ವೇಳೆ ಹಲವು ಅಕ್ರಮಗಳು ಪತ್ತೆಯಾಗಿವೆ.

Share This Article
";