ನವದೆಹಲಿ,ಏ.24 : ಆಮ್ ಆದ್ಮಿ ಪಕ್ಷದ ರಾಜ್ಯಸಭಾ ಸದಸ್ಯರಾದ ರಾಘವ್ ಛಡ್ಡಾ, ಸಂದೀಪ್ ಪಾಠಕ್ ಸೇರಿದಂತೆ ಪಕ್ಷದ ಏಳು ಸದಸ್ಯರು ಬಿಜೆಪಿಗೆ ಸೇರ್ಪಡೆಯಾಗುತ್ತಿರುವುದಾಗಿ ಶುಕ್ರವಾರ ಘೋಷಿಸಿದ್ದಾರೆ.
ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಛಡ್ಡಾ, ಎಎಪಿಯ 10 ಮಂದಿ ರಾಜ್ಯಸಭಾ ಸದಸ್ಯರಲ್ಲಿ ಏಳು ಮಂದಿ ಬಿಜೆಪಿ ಸೇರಿಕೊಳ್ಳುತ್ತಿದ್ದಾರೆ ಎಂದು ತಿಳಿಸಿದ್ದಾರೆ.
ಈ ಸಂಬಂಧ ರಾಜ್ಯಸಭೆಯ ಸಭಾಪತಿ ಸಿ.ಪಿ. ರಾಧಾಕೃಷ್ಣನ್ ಅವರಿಗೆ ಪತ್ರವನ್ನು ಸಲ್ಲಿಸಿದ್ದೇವೆ. ಪಕ್ಷದ ಮೂರನೇ ಎರಡರಷ್ಟು ಸದಸ್ಯರು ಬಿಜೆಪಿಯೊಂದಿಗೆ ವಿಲೀನಗೊಳ್ಳುತ್ತಿದ್ದಾರೆ. ಅಗತ್ಯವಿ ರುವ ಎಲ್ಲ ದಾಖಲೆಗಳನ್ನು ಸಲ್ಲಿ ಸುತ್ತಿದ್ದೇವೆ ಎಂದು ಹೇಳಿದ್ದಾರೆ.
ಹರಭಜನ್ ಸಿಂಗ್, ರಾಜೇಂದ್ರ ಗುಪ್ತಾ, ವಿಕ್ರಮ್ ಸಾಹ್ನಿ, ಸ್ವಾತಿ ಮಾಲಿವಾಲ್ ಹಾಗೂ ಅಶೋಕ್ ಮಿತ್ತಲ್ ಸಹ ಬಿಜೆಪಿಗೆ ಸೇರುತ್ತಿದ್ದಾರೆ ಎಂದು ಛಡ್ಡಾ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯ ವೇಳೆ ಛಡ್ಡಾ ಅವರೊಂದಿಗೆ ಸಂದೀಪ್ ಪಾಠಕ್ ಹಾಗೂ ಅಶೋಕ್ ಮಿತ್ತಲ್ ಉಪಸ್ಥಿತರಿದ್ದರು.
