ಬೆಂಗಳೂರು,ಅ.24 : ಚನ್ನಪಟ್ಟಣ ಉಪಚುನಾವಣೆಗೆ ಮೈತ್ರಿ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಹೆಸರು ಘೋಷಣೆಯಾಗಿದೆ. ಇದರ ಬೆನ್ನಲ್ಲೇ ಇದೀಗ ಯಶವಂತಪುರದ ಬಿಜೆಪಿ ಶಾಸಕ
ಎಸ್.ಟಿ. ಸೋಮಶೇಖರ್ ಸ್ಪೋಟಕ ಹೇಳಿಕೆಯನ್ನು ನೀಡಿದ್ದಾರೆ.
ಮಾಜಿ ಸಚಿವ ಸಿ.ಪಿ. ಯೋಗೇಶ್ವರ್ ಚನ್ನಪಟ್ಟಣ ಟಿಕೆಟ್ ವಿಚಾರವಾಗಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದಾರೆ. ಸಿ.ಪಿ. ಯೋಗೇಶ್ವರ್ ಅವರಿಂದ ಚನ್ನಾಗಿ ದುಡಿಸಿಕೊಂಡು ಇದೀಗ ಅವರನ್ನು ಕೈಬಿಟ್ಟಿದ್ದಾರೆ. ವಿಪಕ್ಷ ನಾಯಕ ಆರ್. ಅಶೋಕ್ ಅವರ ಮಾತು ಕೇಳಬಾರದು.
ನನ್ನ ಮೇಲೆ ಯಾವುದೇ ಶಿಸ್ತು ಕ್ರಮ ಜರುಗಿಸಿದರೂ ನನಗೆ ಭಯವಿಲ್ಲ. ನೋಡ್ತಾ ಇರಿ ಮುಂದೆ ಬೆಂಗಳೂರಿನ ಇಬ್ಬರು ಶಾಸಕರು ಸೇರಿದಂತೆ ಒಟ್ಟು 8 ಬಿಜೆಪಿ ಶಾಸಕರು ಕಾಂಗ್ರೆಸ್‌ಗೆ ಹೋಗ್ತಾರೆ ಎಂದು ಹೇಳಿದ್ದಾರೆ.
ನನಗೆ ನನ್ನ ಕ್ಷೇತ್ರದ ಅಭಿವೃದ್ಧಿ ಯಾಗಬೇಕು. ಹೀಗಾಗಿ ನಾನು ಬಿಜೆಪಿ ಶಾಸಕನಾಗಿದ್ದರೂ ಅಭಿವೃದ್ಧಿ ವಿಚಾರ ವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಭೇಟಿಯಾಗುತ್ತಿರುತ್ತೇನೆ. ಯೋಗೇಶ್ವರ್ ವಿಚಾರದಲ್ಲಿ ಪಕ್ಷ ಈ ರೀತಿ ಮಾಡಬಾರದಿತ್ತು ಎಂದು ಹೇಳಿದ್ದಾರೆ.