ಬೆಂಗಳೂರು,ಜು.23 :ನೋಟಿಸ್ ನೀಡಲಾಗಿರುವ ಒಂಬತ್ತು ಸಾವಿರ ಸಣ್ಣ ವರ್ತಕರ ಹಳೆಯ ಜಿಎಸ್‌ಟಿ ಬಾಕಿ ಮನ್ನಾ ಮಾಡಲಾಗುವುದು. ಆದರೆ, ಎಲ್ಲರೂ ಇನ್ನುಮುಂದೆ ಕಡ್ಡಾಯವಾಗಿ ಜಿಎಸ್‌ಟಿ ನೋಂದಣಿ ಮಾಡಬೇಕು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಸಣ್ಣ ವರ್ತಕರಿಗೆ ವಾಣಿಜ್ಯ ತೆರಿಗೆ ಇಲಾಖೆ ನೀಡಿರುವ ಜಿಎಸ್‌ಟಿ ನೊಟೀಸ್ ವಿಷಯ ಕುರಿತು ಬುಧವಾರ ನಡೆದ ಸಭೆಯ ನಂತರ ಅವರು ಸುದ್ದಿಗಾರರ ಜತೆ ಮಾತನಾಡಿದರು. ವ್ಯಾಪಾರಿಗಳನ್ನು ಪ್ರತಿನಿಸುವ ಹಲವು ಸಂಘಟನೆಗಳ ಪ್ರತಿನಿಗಳು ತಮ್ಮ ಅಹವಾಲುಗಳನ್ನು ಸಲ್ಲಿಸಿದ್ದಾರೆ. ಸಣ್ಣ ವ್ಯಾಪಾರಿಗಳಲ್ಲಿ ಜಿಎಸ್‌ಟಿ ನೋಟಿಸ್ ಕುರಿತು ಗೊಂದಲ ಇದೆ. ಸಾಲದ ಮೊತ್ತ ಕೂಡಾ ಇದರಲ್ಲಿ ಸೇರಿಕೊಂಡಿದೆ. ವೈಯಕ್ತಿಕ ವಹಿವಾಟು ಹಣ ಸಹ ಇದರಲ್ಲಿ ಸೇರಿದೆ ಎಂದು ವರ್ತಕರು ದೂರು ಸಲ್ಲಿಸಿದ್ದಾರೆ. ನೋಟಿಸ್ ನೀಡುವುದು ತಪ್ಪಲ್ಲ.
ಆದರೆ, ವ್ಯಾಪಾರಿಗಳಿಗೆ ಪರಿಹಾರ ತೆರಿಗೆ ಪಾವತಿಸಲು ಅವಕಾಶ ನೀಡಬೇಕು. ಮಧ್ಯವರ್ತಿಗಳಿಗೆ ಅವಕಾಶ ನೀಡದೆ, ವ್ಯಾಪಾರಿಗಳು ನೇರವಾಗಿ ಇಲಾಖೆ ಸಂಪರ್ಕಿಸಿ ಸಮಸ್ಯೆ ಬಗೆಹರಿಸಲು ಕ್ರಮ ಕೈಗೊಳ್ಳಬೇಕು ಎಂದು ಸಲಹೆ ನೀಡಿದರು.
ಯುಪಿಐ ಅಡಿ ರೂ.40 ಲಕ್ಷಕ್ಕೂ ಅಕ ವಹಿವಾಟು ಮಾಡಿರುವವರಿಗೆ ಮಾತ್ರ ಜಿಎಸ್‌ಟಿ ನೋಟಿಸ್ ನೀಡಲಾಗಿದೆ. ಆರಂಭದಲ್ಲಿ ನೋಂದಣಿ ಮಾಡುವಂತೆ ನೋಟಿಸ್ ನೀಡಲಾಗಿತ್ತು. ಹಾಲು, ತರಕಾರಿ, ಮಾಂಸ, ಹಣ್ಣಿನಂತಹ ಅಗತ್ಯ ಆಹಾರ ವಸ್ತುಗಳಿಗೆ ತೆರಿಗೆ ವಿನಾಯಿತಿ ಇದ್ದು, ಅಂತಹ ವ್ಯಾಪಾರಿಗಳಿಗೆ ನೋಟಿಸ್ ಕೊಟ್ಟಿದ್ದರೂ, ಅವರಿಂದ ತೆರಿಗೆ ವಸೂಲು ಮಾಡುವುದಿಲ್ಲ ಎಂದು ವಾಣಿಜ್ಯ ತೆರಿಗೆ ಇಲಾಖೆ ಅಕಾರಿಗಳು ಹೇಳಿದ್ದಾರೆ. ಆದರೆ, ಯಾರು ಕಾಯ್ದೆ ಪ್ರಕಾರ ತೆರಿಗೆ ಕಟ್ಟಬೇಕಾಗಿದೆಯೋ ಅವರು ಕಟ್ಟಬೇಕು ಎಂದರು.
ಯುಪಿಐ ವಹಿವಾಟು ಕೈಬಿಟ್ಟರೆ ವಹಿವಾಟಿನ ಮೇಲೆ ಪರಿಣಾಮ ಬೀರಲಿದೆ. ರಾಜ್ಯದಲ್ಲಿ ಕೇವಲ ಒಂಬತ್ತು ಸಾವಿರ ವ್ಯಾಪಾರಿಗಳಿಗೆ ಕಳೆದ 2-3 ವರ್ಷಗಳ ಅವಯಲ್ಲಿ ೧೮ ಸಾವಿರ ನೋಟಿಸ್ ಜಾರಿಗೊಳಿಸಲಾಗಿದೆ. ವ್ಯಾಪಾರ ವಹಿವಾಟುಗಳನ್ನು ಕಾನೂನು ಬದ್ಧವಾಗಿ ಸರ್ಕಾರ ಎಲ್ಲಾ ನೆರವು ನೀಡಲಿದೆ ಎಂದು ಭರವಸೆ ನೀಡಿದರು.