ಶಿವಮೊಗ್ಗ: ವಿದ್ಯಾರ್ಥಿನಿಯ ಜೊತೆ ಸ್ನೇಹ ಬೆಳೆಸಿದ್ದ,ನಂತರ ಮದುವೆಯಾಗುವುದಾಗಿ ನಂಬಿಸಿ ಉಪನ್ಯಾಸಕ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿರುವ ಘಟನೆ ಸಾಗರದಿಂದ ವರದಿಯಾಗಿದೆ.
ವಿದ್ಯಾರ್ಥಿನಿಯನ್ನು ಪುಸಲಾಯಿಸಿದ ಉಪನ್ಯಾಸಕನೊಬ್ಬ ಮದುವೆ ಆಗುವುದಾಗಿ ನಂಬಿಸಿ ಅತ್ಯಾಚಾರವೆಸಗಿದ್ದಾನೆ. ಸಾಗರ ಪಟ್ಟಣದಲ್ಲಿ ಉಪನ್ಯಾಸಕನನ್ನು ಪೊಲೀಸರು ಬಂಧಿಸಿದ್ದಾರೆ.
ಸಾಗರದ ಖಾಸಗಿ ಕಾಲೇಜಿನ ಉಪನ್ಯಾಸಕನಾಗಿರುವ ಪುನೀತ್ ಬಂಧಿತ ಆರೋಪಿಯಾಗಿದ್ದಾನೆ.ಸದ್ಯ ಅತ್ಯಾಚಾರ ಕುರಿತು ಶಿವಮೊಗ್ಗ ನಗರದ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಆರೋಪಿ ಉಪನ್ಯಾಸಕ ಪುನೀತ್ ವಶಕ್ಕೆ ಪಡೆದ ಪೊಲೀಸರು ವಿಚಾರಣೆಯನ್ನು ಮುಂದುವರಿಸಿದ್ದಾರೆ.