ರಾಜ್ಯ ಗುತ್ತಿಗೆದಾರರ ಸಂಘ’ದ ಅಧ್ಯಕ್ಷ ಡಿ. ಕೆಂಪಣ್ಣ ನಿಧನ

Kranti Deepa

ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧ 40 ಪರ್ಸೆಂಟ್ ಕಮಿಷನ್ ಗಂಭೀರ ಆರೋಪ ಮಾಡಿದ್ದ ‘ರಾಜ್ಯ ಗುತ್ತಿಗೆದಾರರ ಸಂಘ’ದ ಅಧ್ಯಕ್ಷ ಡಿ. ಕೆಂಪಣ್ಣ (84) ಗುರುವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಬಿಜೆಪಿ ಸರ್ಕಾರದ ವಿರುದ್ಧ 40 ಪರ್ಸೆಂಟ್ ಕಮಿಷನ್ ಗಂಭೀರ ಆರೋಪ ಮಾಡಿದ್ದ ಕೆಂಪಣ್ಣ ಅವರು, ಹಿಂದಿನ ಸರ್ಕಾರದ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಪ್ರಧಾನಿ ನರೇಂದ್ರ ಮೋದಿ ಮತ್ತು ರಾಜ್ಯಪಾಲರಿಗೆ ಪತ್ರ ಬರೆದು ದೇಶದಾದ್ಯಂತ ದೊಡ್ಡ ಸುದ್ದಿಯಾಗಿದ್ದರು.

ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಕೆಂಪಣ್ಣ ಇತ್ತೀಚೆಗಷ್ಟೇ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಸು, ಡಿಸ್ಚಾರ್ಜ್ ಆಗಿ ಮನೆಗೆ ಮರಳಿದ್ದರು. ಇಂದು (ಸೆ.19) ಬೆಳಗ್ಗೆ 10 ಗಂಟೆಗೆ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ.

ಡಿ. ಕೆಂಪಣ್ಣ ಅವರು ಹಿಂದಿನ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ಮಾಡಿದ್ದ 40 ಪರ್ಸೆಂಟ್ ಕಮಿಷನ್ ಆರೋಪ ರಾಜ್ಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿತ್ತು. ಕೆಂಪಣ್ಣ ಅವರ ಆರೋಪವನ್ನು ಕಾಂಗ್ರೆಸ್‌ ರಾಜಕೀಯ ಅಸ್ತ್ರವನ್ನಾಗಿ ಬಳಸಿಕೊಂಡು, ಬಿಜೆಪಿ ವಿರುದ್ಧ‘ಪೇ ಸಿಎಂ’ ಅಭಿಯಾನವನ್ನು ಯಶಸ್ವಿಯಾಗಿ ನಡೆಸಿತ್ತು.

Share This Article
";