ಕೇರಳ,ಅ.28 : ಪಾಲಕ್ಕಾಡ್ ಜಿಲ್ಲೆಯ ಪಾಟಾಂಬಿ ಫಾಸ್ಟ್ ಟ್ರ್ಯಾಕ್ ವಿಶೇಷ ನ್ಯಾಯಾಲಯವು ಭೀಕರ ತೀರ್ಪು ನೀಡಿದೆ. ಇನ್‌ಸ್ಟಾಗ್ರಾಮ್ ಮೂಲಕ ಪರಿಚಯವಾದ ಯುವತಿಗೆ ಲೈಂಗಿಕ ದೌರ್ಜನ್ಯ ಎಸಗಿ ಗರ್ಭಿಣಿಯಾಗಿಸಿದ ಪ್ರಕರಣದಲ್ಲಿ ಆರೋಪಿಗೆ ಕಠಿಣ ಜೈಲು ಶಿಕ್ಷೆ.
ಎಡತ್ತನಾಟ್ಟುಕರ ವಡಮ್ಮಣ್ಣಪುರಂ ನಿವಾಸಿ ಮೊಹಮ್ಮದ್ ಅಜಾಸ್ (21) ಗೆ 60 ವರ್ಷಗಳ ಕಠಿಣ ಜೈಲು ಶಿಕ್ಷೆ ಹಾಗೂ ರೂ.20,000/- ದಂಡವನ್ನು ವಿಧಿಸಿ ಕೇರಳದ ಪಾಲಕ್ಕಾಡ್ ಜಿಲ್ಲೆಯ ಪಾಟಾಂಬಿ ಫಾಸ್ಟ್ ಟ್ರ್ಯಾಕ್ ವಿಶೇಷ ನ್ಯಾಯಾಲಯವು ಕಠಿಣ ತೀರ್ಪು ನೀಡಿದೆ.
ನ್ಯಾಯಾಲಯವು ದಂಡದ ಮೊತ್ತವನ್ನು ದೌರ್ಜನ್ಯಕ್ಕೊಳಗಾದ ಯುವತಿಗೆ ನೀಡುವಂತೆ ನಿರ್ದೇಶಿಸಿದೆ. 2021ರಲ್ಲಿ ಯುವತಿ ಮಣ್ಣಾರ್ಕಾಡ್ ಪೊಲೀಸ್ ಠಾಣೆಯಲ್ಲಿ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಾಗಿತ್ತು. ತನಿಖೆ ವೇಳೆ 24 ದಾಖಲೆಗಳು ಮತ್ತು 15 ಸಾಕ್ಷಿಗಳ ಆಧಾರದ ಮೇಲೆ ವಿಚಾರಣೆ ನಡೆಸಲಾಯಿತು.
ಮುಖ್ಯಮಂತ್ರಿ ಈ ಕುರಿತು ಸ್ಪಷ್ಟನೆ ನೀಡಿದ ನಂತರ, ಕ್ರೈಂ ಬ್ರಾಂಚ್ ಮಹಿಳೆಯರ ಹೇಳಿಕೆಗಳನ್ನು ಸಂಗ್ರಹಿಸಿ, ಕಾನೂನು ಕ್ರಮ ಕೈಗೊಳ್ಳುವುದಾಗಿ ತಿಳಿಸಿದೆ. ಶಾಸಕರ ವಿರುದ್ಧ ಐಪಿಸಿನ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.