ಶಿವಮೊಗ್ಗ,ನ.04 : ರಸ್ತೆ ದಾಟುತ್ತಿದ್ದ ದ್ವಿಚಕ್ರ ವಾಹನಕ್ಕೆ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಸಾಗರ ತಾಲೂಕಿನ ತಾಳಗುಪ್ಪ ಗ್ರಾಮ ಪಂಚಾಯತಿ ವ್ಯಾಪ್ತಿಯ ಗುಡ್ಡೆಮನೆ ಬಳಿ ಕಳೆದ ಎರಡು ದಿನದ ಹಿಂದೆ ನಡೆದಿದೆ. ಬೈಕ್ ಸವಾರನಿಗೆ ಗಂಭೀರ ಸ್ವರೂಪದ ಗಾಯಗಳಾಗಿವೆ. ಘಟನೆಯ ಭೀಕರ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಚೂರಿಕಟ್ಟೆಯ ನಿವಾಸಿ ಗೋಪಾಲ ಎಂಬವರು ಅಕ್ಟೋಬರ್ 31 ರಂದು ಬೈಕ್‌ನಲ್ಲಿ ರಸ್ತೆ ದಾಟುತ್ತಿದ್ದರು. ಈ ವೇಳೆ ಬಸ್ ಡಿಕ್ಕಿ ಹೊಡೆದಿದೆ. ರಸ್ತೆ ಪಕ್ಕದ ಅಂಗಡಿಯಲ್ಲಿ ಅಳವಡಿಸಲಾಗಿದ್ದ ಸಿಸಿ ಕ್ಯಾಮೆರಾದಲ್ಲಿ ದೃಶ್ಯ ದಾಖಲಾಗಿದೆ.
ಗೋಪಾಲ ಅವರ ತಲೆಗೆ ಬಲವಾದ ಪೆಟ್ಟು ಬಿದ್ದಿದ್ದು, ಸಾಗರದ ಉಪವಿಭಾಗೀಯ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಲಾಯಿತು. ನಂತರ ಮಂಗಳೂರಿನ ಕೆ.ಎಸ್.ಹೆಗಡೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.