ಶಿವಮೊಗ್ಗನ.04 : ಸಾಗರ ತಾಲೂಕು ತುಮರಿ ಸಮೀಪದ ಕುದರೂರು ಗ್ರಾಮದ ಬೆಳಮಕ್ಕಿ ಯಲ್ಲಿ ಸುರಿದ ಗುಡುಗು ಸಹಿತ ಗಾಳಿ ಮಳೆಗೆ ರೈತರೊಬ್ಬರ ಮನೆ ಮೇಲೆ ಮರ ಬಿದ್ದು ಸಾಕಷ್ಟು ಹಾನಿಯಾಗಿದೆ.
ಚೌಡ ನಾಯ್ಕ ಅವರ ಮನೆಯ ಮೇಲೆ ಬೃಹತ್ ಗಾತ್ರದ ತೆಂಗಿನಮರ ಬಿದ್ದು ಮನೆಯ ಹೆಂಚುಗಳು ಪುಡಿಯಾಗಿವೆ.
ಮರದ ನಾಟ ಮುರಿದಿವೆ. ಅಪಾರ ಪ್ರಮಾಣದ ನಷ್ಟ ಉಂಟಾಗಿದೆ. ಕುಟುಂಬ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗ್ರಾಮಸ್ಥರ ಸಹಾಯದಿಂದ ಮರವನ್ನು ತೆರವು ಮಾಡಲಾಗಿದೆ.
ಕುದರೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸರಸ್ವತಿ ಗಣಪತಿ ಭೇಟಿ ನೀಡಿ ಸ್ಥಳ ಪರಿಶೀಲಿಸಿದರು.