ನಗರದಲ್ಲಿ ನಾಲ್ಕು ದಿನಗಳ ಕೃಷಿ-ತೋಟಗಾರಿಕೆ ಮೇಳ

Kranti Deepa

ಶಿವಮೊಗ್ಗ : ನಗರದಲ್ಲಿ ನಾಲ್ಕು ದಿನಗಳ ಕೃಷಿ ಮತ್ತು ತೋಟಗಾರಿಕಾ ಮೇಳ-2024 ನ್ನು ’ಪೌಷ್ಠಿಕ ಆಹಾರಕ್ಕಾಗಿ ವಿಕಸಿತ ಕೃಷಿ’ ಎಂಬ ಧೈಯವಾಕ್ಯದೊಂದಿಗೆ ಕೃಷಿ ಮಹಾವಿದ್ಯಾಲಯದ ನವುಲೆ ಆವರಣದಲ್ಲಿ ಆಚರಿಸಲು ಉದ್ದೇಶಿಸಿದೆ ಎಂದು ವಿಶ್ವವಿದ್ಯಾಲಯದ ಕುಲಪತಿ ಡಾ.ಆರ್.ಸಿ.ಜಗದೀಶ್ ಅವರು ಹೇಳಿದರು.

ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ಈ ಸಂಬಂಧ ಮಾಧ್ಯಮ ಪ್ರತಿನಿಧಿಗಳಿಗೆ ಮಾಹಿತಿ ನೀಡಿ ಮಾತನಾ ಡುತ್ತಿದ್ದರು. ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟ ಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಶಿವಮೊಗ್ಗವು ಕೃಷಿ ಹಾಗೂ ಕೃಷಿ ಸಂಬಂಧಿತ ಅಭಿವೃದ್ಧಿ ಇಲಾಖೆಗಳ ಸಹ ಯೋಗದೊಂದಿಗೆ, ಏರ್ಪಡಿಸಲಾಗಿದೆ ಅಲ್ಲದೇ ಶ್ರೇಷ್ಟ ರೈತ ಮತ್ತು ರೈತ ಮಹಿಳೆಯರಿಗೆ ಪ್ರಶಸ್ತಿ ಪ್ರಧಾನ ಸಮಾ ರಂಭವನ್ನು ಏರ್ಪಡಿಸಲಾಗಿದೆ ಎಂದ ಅವರು, ಅಲ್ಲದೇ ಕೃಷಿ ಮೇಳದ ತಾಂತ್ರಿಕ ಸಮಾವೇಶದಲ್ಲಿ ರೈತರ ಸಮಸ್ಯೆ ಗಳಿಗೆ ತಜ್ಞರಿಂದ ಸಲಹೆಯನ್ನು ಕೊಡಿಸಲಾಗುವುದು ಎಂದರು.

ಕೃಷಿ ಮತ್ತು ತೋಟಗಾರಿಕಾ ಮೇಳದ ಅಂಗವಾಗಿ ನಡೆಸಲಾಗುವ ಅಕ್ಟೋಬರ್ 18 ರಂದು ತಾಂತ್ರಿಕ ಸಮಾವೇಶದಲ್ಲಿ ವಿಕಸಿತ ಕೃಷಿಯಲ್ಲಿ ಮೌಲ್ಯವರ್ಧನೆ ಮತ್ತು ಮಾರುಕಟ್ಟೆ, ಅಡಿಕೆ ಬೆಳೆಯಲ್ಲಿ ಸಮಗ್ರ ರೋಗ ನಿರ್ವಹಣೆ, ಅಡಿಕೆ ಉಪಉತ್ಪನ್ನಗಳ ಸದ್ಬಳಕೆ, ಅಡಿಕೆ ಮಾರುಕಟ್ಟೆ ವ್ಯವಸ್ಥೆ ಮತ್ತು ಮೌಲ್ಯವರ್ಧನೆ ಮತ್ತಿತರ ವಿಷಯಗಳ ಬಗ್ಗೆ ವಿಜ್ಞಾನಿಗಳು, ಪ್ರಗತಿಪರ ರೈತ ಹಾಗೂ ಸಂಪನ್ಮೂಲ ವ್ಯಕ್ತಿಗಳಿಂದ ರೈತರಿಗೆ ಸಂವಾದವನ್ನು ಏರ್ಪಡಿಸಲಾಗಿದೆ ಎಂದರು.

ಅಕ್ಟೋಬರ್ ೧೯ರಂದು ಸಧೃಡ ಭಾರತಕ್ಕಾಗಿ ವಿಕಸಿತ ಕೃಷಿ, ಕೃಷಿಯಲ್ಲಿ ಸುಸ್ಥಿರತೆಗೆ ಅರಣ್ಯ ಕೃಷಿ, ಪಶು ಸಂಗೋಪನೆ-ಆಹಾರ ಭದ್ರತೆ, ಕೃಷಿಯಲ್ಲಿ ಡೋನ್ ಬಳಕೆ. ಸಿರಿಧಾನ್ಯಗಳ ಮೌಲ್ಯವರ್ಧಿತ ಉತ್ಪನ್ನಗಳ ವಿಷಯ ಗಳ ಬಗ್ಗೆ ವಿಜ್ಞಾನಿಗಳು, ಪ್ರಗತಿಪರ ರೈತ ಹಾಗೂ ಸಂಪ ನ್ಮೂಲ ವ್ಯಕ್ತಿಗಳಿಂದ ರೈತರಿಗೆ ಸಂವಾದವನ್ನು ಏರ್ಪಡಿ ಸಲಾಗಿದೆ ಎಂದರು.  ಅಕ್ಟೋಬರ್ ೨೦ರಂದು ವೈಜಾನಿಕ ಶುಂಠಿ ಮತ್ತು ಕಾಳುಮೆಣಸು ಕೃಷಿ, ಕಾಳುಮೆಣಸು ಕೃಷಿ- ರೈತರ ಅನುಭವ, ಗೋಡಂಬಿ ಬೆಳೆ ಸಂಸ್ಕರಣೆ ಹಾಗೂ ಮೌಲ್ಯವರ್ಧನೆ, ಕೃಷಿ ನವೋದ್ಯಮ ಮತ್ತು ಸೆಕೆಂಡರಿ ಕೃಷಿ, ಸಾಂಬಾರು ಬೆಳೆಗಳ ಮೌಲ್ಯವರ್ಧನೆ ವಿಷಯಗಳ ಬಗ್ಗೆ ವಿಜ್ಞಾನಿಗಳು, ಪ್ರಗತಿಪರ ರೈತ ಹಾಗೂ ಸಂಪನ್ಮೂಲ ವ್ಯಕ್ತಿಗಳಿಂದ ರೈತರಿಗೆ ಸಂವಾದವನ್ನು ಏರ್ಪಡಿಸಲಾಗಿದೆ.

ಇದರ ಜೊತೆಯಲ್ಲಿ ಶ್ವಾನ ಪ್ರದ ರ್ಶನವನ್ನು ಏರ್ಪಡಿಸಲಾಗಿದೆ ಎಂದವರು ತಿಳಿಸಿದರು.ಅಲ್ಲದೇ ಕೃಷಿ ಮೇಳದ ಸಂದರ್ಭದಲ್ಲಿ ಕೃಷಿ ವಸ್ತು ಪ್ರದರ್ಶನ, ವಿವಿಧ ಬೆಳೆಗಳ ಪ್ರಾತ್ಯಕ್ಷಿಕೆಯ ’ಸಸ್ಯಕಾಶಿ’ಗಳ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿದೆ. ಅಲ್ಲದೆ, ನಮ್ಮ ವಿಶ್ವವಿದ್ಯಾಲಯದ ವ್ಯಾಪ್ತಿಗೆ ಬರುವ ಏಳು ಜಿಲ್ಲೆಗಳಿಂದ ಕೃಷಿ ಮತ್ತು ತೋಟಗಾರಿಕೆಯಲ್ಲಿ ಕೃಷಿ ಮೇಳವನ್ನು ಮುಖ್ಯಮಂತ್ರಿಗಳು, ಇವರು ಉದ್ಘಾಟಿಸಲಿದ್ದು, ಕೃಷಿ ಸಚಿವರು, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು, ಸನ್ಮಾನ್ಯ ಗಣಿ ಭೂ ವಿಜ್ಞಾನ ಮತ್ತು ತೋಟಗಾರಿಕೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ದಾವಣಗೆರೆ, ಸಂಸದರು ವಿಧಾನ ಸಭಾ ಶಾಸಕರುಗಳು ಭಾಗ ವಹಿಸಲಿದ್ದಾರೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ವಿಸ್ತರಣಾ ನಿರ್ದೇಶಕ ಡಾ|| ಕೆ.ಟಿ.ಗುರುಮೂರ್ತಿ, ಶಿಕ್ಷಣ ನಿರ್ದೇಶಕ ಡಾ|| ಹೇಮ್ಲಾ ನಾಯ್ಕ್, ಕೃಷಿ ಡೀನ್ ಡಾ|| ತಿಪ್ಪೇಶ್ ಡಿ ಸೇರಿದಂತೆ ವಿವಿಯ ವಿವಿಧ ವಿಭಾಗಗಳ ಉಪನ್ಯಾಸಕರು, ತಾಂತ್ರಿಕ ವರ್ಗದವರು ಉಪಸ್ಥಿತರಿದ್ದರು.

Share This Article
";