ತೀರ್ಥಹಳ್ಳಿ,ಮೇ.08 : ತಾಲೂಕಿನ ಮಂಡಗದ್ದೆ ಸಮೀಪ ಚಿರತೆಯೊಂದಕ್ಕೆ ಬೈಕ್ ಡಿಕ್ಕಿ ಹೊಡೆದು ಚಿರತೆ ಸಾವನ್ನಪ್ಪಿರುವ ಘಟನೆ ನಡೆದಿದೆ.
ಶಿವಮೊಗ್ಗ ಕಡೆಯಿಂದ ತೀರ್ಥಹಳ್ಳಿಗೆ ತೆರಳುತ್ತಿದ್ದ ಬೈಕ್ ಗೆ ಚಿರತೆ ಅಡ್ಡ ಬಂದಿದೆ. ಇದರಿಂದ ನಿಯಂತ್ರಣ ತಪ್ಪಿದ ಬೈಕ್ ಸವಾರ ಚಿರತೆಗೆ ಡಿಕ್ಕಿ ಹೊಡೆದಿದ್ದಾನೆ. ಇದರ ಪರಿಣಾಮ ತೀವ್ರ ಗಾಯಗೊಂಡ ಚಿರತೆ ಸ್ಥಳದಲ್ಲೇ ಸಾವನ್ನಪ್ಪಿದ್ದು. ಬೈಕ್ ಸವಾರನಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಈ ಸಂಬಂಧ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನೆಡೆಸಿದ್ದಾರೆ.
