ಯಶವಂತಪುರ – ತಾಳಗುಪ್ಪ ಮಧ್ಯೆ ವಿಶೇಷ ರೈಲು

Kranti Deepa

ಶಿವಮೊಗ್ಗ, ಸೆ.15 : ದಸರಾ ಹಬ್ಬದ ಹಿನ್ನೆಲೆಯಲ್ಲಿ  ಯಶವಂತಪುರ – ತಾಳಗುಪ್ಪ ಮಧ್ಯೆ ವಿಶೇಷ ರೈಲು  ಮೂರು ಟ್ರಿಪ್ ಸಂಚರಿಸಲಿದೆ ಎಂದು ನೈಋತ್ಯ ರೈಲ್ವೆಯ ಮೈಸೂರು ವಿಭಾಗ ಪ್ರಕಟಣೆಯಲ್ಲಿ ತಿಳಿಸಿದೆ.

ದಸರಾ ಹಬ್ಬದ ಸಂದರ್ಭ ಪ್ರಯಾಣಿಕರ ದಟ್ಟಣೆ ನಿವಾರಿಸಲು ನೈಋತ್ಯ ರೈಲ್ವೆಯು ಯಶವಂತಪುರ ಹಾಗೂ ತಾಳಗುಪ್ಪ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಓಡಿಸಲಿದೆ. ಈ ರೈಲು ಪ್ರತಿ ದಿಕ್ಕಿನಲ್ಲಿ ಮೂರು ಟ್ರಿಪ್‌ಗಳನ್ನು ಪೂರ್ಣಗೊಳಿಸಲಿದೆ. ರೈಲು ಸಂಖ್ಯೆ 06587  ಯಶವಂತಪುರ- ತಾಳಗುಪ್ಪ ಎಕ್ಸ್‌ಪ್ರೆಸ್ ವಿಶೇಷ ರೈಲು ಸೆಪ್ಟೆಂಬರ್ 19, 26 ಮತ್ತು ಅಕ್ಟೋಬರ್ 3 ರಂದು ರಾತ್ರಿ 10.30ಕ್ಕೆ ಯಶವಂತಪುರ ನಿಲ್ದಾಣದಿಂದ ಹೊರಟು, ಮರುದಿನ ಮುಂಜಾನೆ 4.15 ಕ್ಕೆ ತಾಳಗುಪ್ಪ ತಲುಪಲಿದೆ.

ರೈಲು ಸಂಖ್ಯೆ 06588  ತಾಳಗುಪ್ಪ- ಯಶವಂತಪುರ ಎಕ್ಸ್‌ಪ್ರೆಸ್ ವಿಶೇಷ ರೈಲು ಸೆಪ್ಟೆಂಬರ್ 20, 27 ಮತ್ತು ಅಕ್ಟೋಬರ್ 4 ರಂದು ತಾಳಗುಪ್ಪದಿಂದ ಬೆಳಗ್ಗೆ 10 ಗಂಟೆಗೆ ಹೊರಟು, ಅದೇ ದಿನ ಸಂಜೆ 5.15 ಕ್ಕೆ ಯಶವಂತಪುರ ತಲುಪಲಿದೆ. ಈ ವಿಶೇಷ ರೈಲು, ಎರಡೂ ಮಾರ್ಗದಲ್ಲಿ ತುಮಕೂರು, ತಿಪಟೂರು, ಅರಸೀಕೆರೆ, ಬೀರೂರು, ತರೀಕೆರೆ, ಭದ್ರಾವತಿ, ಶಿವಮೊಗ್ಗ ಟೌನ್, ಆನಂದಪುರಂ ಹಾಗೂ ಸಾಗರ ಜಂಬಗಾರು ನಿಲ್ದಾಣಗಳಲ್ಲಿ ನಿಲುಗಡೆಗೊಳ್ಳಲಿದೆ.

ಈ ವಿಶೇಷ ರೈಲಿನಲ್ಲಿ ಒಟ್ಟು 20 ಬೋಗಿಗಳಿರಲಿವೆ. ಅವುಗಳಲ್ಲಿ ಒಂದು ಎಸಿ ಟು-ಟಯರ್, ಎರಡು ಎಸಿ ಥ್ರೀ-ಟಯರ್, ಹತ್ತು ಸ್ಲೀಪರ್ ಕ್ಲಾಸ್, ಐದು ಸಾಮಾನ್ಯ ದ್ವಿತೀಯ ದರ್ಜೆ ಹಾಗೂ ಎರಡು ದ್ವಿತೀಯ ದರ್ಜೆ ಲಗೇಜ್-ಕಮ್-ಬ್ರೇಕ್ ವ್ಯಾನ್‌ಗಳು ಇರಲಿವೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Share This Article
";