ಸಾಲಬಾಧೆ ತಾಳಲಾರದೆ ಯುವಕ ಆತ್ಮಹತ್ಯೆ

Kranti Deepa

ಶಿವಮೊಗ್ಗ, ಆ.21: ಸಾಲಬಾಧೆ ಮತ್ತು ಬೆಳೆ ನಷ್ಟದಿಂದ ಮನನೊಂದಿದ್ದ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಾಗರ ತಾಲೂಕಿನ ಯಡೇಹಳ್ಳಿ ಗ್ರಾಮದಲ್ಲಿ ನಡೆದಿದೆ.
ಮೃತಪಟ್ಟವರನ್ನು ಮಂಜುನಾಥ್ ( 36 ) ಎಂದು ಗುರುತಿಸಲಾಗಿದೆ.

ಮಂಜುನಾಥ್ ಬ್ಯಾಂಕ್ ಸೇರಿದಂತೆ ವಿವಿಧ ಮೂಲಗಳಿಂದ ಸಾಲ ಮಾಡಿಕೊಂಡಿದ್ದರು ಎನ್ನಲಾಗಿದೆ. ಇದೇ ಸಮಯದಲ್ಲಿ, ಇತ್ತೀಚೆಗೆ ಸುರಿದ ಭಾರೀ ಮಳೆಯಿಂದಾಗಿ ಅವರ ಮೆಕ್ಕೆಜೋಳದ ಬೆಳೆ ಸಂಪೂರ್ಣವಾಗಿ ನಾಶವಾಗಿತ್ತು.ಕೃಷಿ ನಷ್ಟದಿಂದ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ ಮಂಜುನಾಥ್, ಸಾಲದ ಒತ್ತಡವನ್ನು ತಾಳಲಾರದೆ ತಮ್ಮ ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Share This Article
";