ಬೈಕ್-ಕಾರು ಅಪಘಾತ: ಯುವಕ ಸಾವು

Kranti Deepa

ಸೊರಬ,ನ.04 : ಬೈಕ್ ಮತ್ತು ಕಾರು ನಡುವೆ ನಡೆದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟು, ಮಹಿಳೆಯೊಬ್ಬರು ತೀವ್ರ ಗಾಯಗೊಂಡ ಘಟನೆ ತಾಲೂಕಿನ ಚಂದ್ರಗುತ್ತಿ ಸಮೀಪದ ಜೋಳದಗುಡ್ಡೆಯ ವರದಾನದಿ ಸೇತುವೆ ಬಳಿ ನಡೆದಿದೆ.

ಹೊಸನಗರ ತಾಲೂಕಿನ ಕಾರಕ್ಕಿ ಗ್ರಾಮದ ಸುದರ್ಶನ (22 ) ಮೃತ ಯುವಕನಾಗಿದ್ದಾನೆ. ಸುದರ್ಶನ ಅತ್ತೆಯೊಂದಿಗೆ ಬೈಕ್ ನಲ್ಲಿ ಹೊಸನಗರದಿಂದ ಸೊರಬ ಮಾರ್ಗವಾಗಿ ಚಂದ್ರಗುತ್ತಿ ಸಮೀಪದ ಭದ್ರಾಪುರ ಗ್ರಾಮಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ಚಂದ್ರಗುತ್ತಿ ಮಾರ್ಗವಾಗಿ ಆಗಮಿಸಿದ ಕಾರು ಡಿಕ್ಕಿ ಹೊಡೆದಿದೆ.

ಪರಿಣಾಮ ಅಪಘಾತದಲ್ಲಿ ತೀವ್ರ ಗಾಯಗೊಂಡ ಬೆಳ್ಳಮ್ಮ ಪುಟ್ಟಪ್ಪ ಚಿಟ್ಟಕ್ಕಿ (65 ) ಅವರಿಗೆ ಸೊರಬದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.ಸೊರಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article
";