ಹೊಸನಗರದ ಅಬ್ಬಿ ಫಾಲ್ಸ್‌ನಲ್ಲಿ ಬೆಂಗಳೂರಿನ ಯುವಕ ನೀರುಪಾಲು

Kranti Deepa

ಹೊಸನಗರ, ಜು.21 : ತಾಲೂಕಿನ ಯಡೂರು ಬಳಿಯಿರುವ ಅಬ್ಬಿ ಫಾಲ್ಸ್‌ನಲ್ಲಿ ಫೋಟೋ ತೆಗೆಸಿಕೊಳ್ಳಲು ಹೋಗಿ ಬೆಂಗಳೂರು ಮೂಲದ ಪ್ರವಾಸಿಗರೊಬ್ಬರು ನೀರುಪಾಲಾಗಿದ್ದಾನೆ.

ಮೃತರನ್ನು ಬೆಂಗಳೂರಿನ ನಾಗರಬಾವಿಯ ಖಾಸಗಿ ಕಂಪನಿಯೊಂದರ ಮ್ಯಾನೇಜರ್ ರಮೇಶ್ (35) ಎಂದು ಗುರುತಿಸಲಾಗಿದೆ. ರಮೇಶ್ ತಮ್ಮ ಐವರು ಸ್ನೇಹಿತರೊಂದಿಗೆ ಪ್ರವಾಸಕ್ಕೆ ಬಂದಿದ್ದರು. ಅಬ್ಬಿ ಫಾಲ್ಸ್‌ನಲ್ಲಿ ಫೋಟೋಗೆ ಪೋಸ್ ನೀಡುವಾಗ ಫಾಲ್ಸ್‌ಗೆ ಇಳಿದಿದ್ದಾರೆ. ಈ ವೇಳೆ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದಾರೆ.

20 ಸೆಕೆಂಡ್‌ನ ವಿಡಿಯೋ ವೈರಲ್

ಇನ್ನು, ಫಾಲ್ಸ್‌ನಲ್ಲಿ ರಮೇಶ್ ಕಣ್ಮರೆಯಾಗುವ 20 ಸೆಕೆಂಡ್‌ನ ವಿಡಿಯೋ ವೈರಲ್ ಆಗಿದೆ. ಫಾಲ್ಸ್‌ನ ತುದಿಯಲ್ಲಿ ಬಂಡೆಯೊಂದರ ಮೇಲೆ ರಮೇಶ್ ಕುಳಿತಿರುತ್ತಾರೆ. ವಿಡಿಯೋದ ಆರಂಭದಲ್ಲಿ ತಮ್ಮ ಎರಡು ಕೈಗಳನ್ನು ಮೇಲೆತ್ತಿ ಸಂಭ್ರಮಿಸುತ್ತಾರೆ. ನಂತರ ತಾನು ಕುಳಿತಿದ್ದ ಬಂಡೆಯಿಂದ ಕೆಳಗಿಳಿಯುತ್ತಾರೆ. ನೀರಿನ ರಭಸಕ್ಕೆ ರಮೇಶ್ ತೇಲಿ ಹೋಗಿದ್ದಾರೆ.

ಈ ವೇಳೆ ಸ್ನೇಹಿತರು ಕೂಗಿಕೊಳ್ಳುವುದು ವಿಡಿಯೋ ರೆಕಾರ್ಡ್ ಆಗಿದೆ.ಘಟನೆಯ ಬಳಿಕ ರಮೇಶ್ ಮೃತದೇಹವು ಫಾಲ್ಸ್‌ನ ಕೆಳಭಾಗದಲ್ಲಿ ಪತ್ತೆಯಾಗಿದೆ. ನಗರ ಠಾಣೆ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article
";