ನವದೆಹಲಿ,ಅ.14 : ಚಿತ್ರದುರ್ಗ ರೇಣುಕಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಅವರ ಜಾಮೀನು ರದ್ದು ಮಾಡಿ ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿದೆ.
ಜುಲೈ 24 ರಂದು ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್ ಚಾಲೆಂಜಿಗ್ ಸ್ಟಾರ್ ದರ್ಶನ್ ಮತ್ತು ನಟಿ ಪವಿತ್ರ ಗೌಡ ಹಾಗೂ ಇತರೆ ಐದು ಆರೋಪಿಗಳಿಗೆ ಜಾಮೀನು ನೀಡಿದ್ದ ಕರ್ನಾಟಕ ಹೈ ಕೋರ್ಟ್ ಕ್ರಮಕ್ಕೆ
ಅಸಮಾಧಾನ ವ್ಯಕ್ತಪಡಿಸಿತ್ತು.
“ಜನಪ್ರಿಯತೆ,ಅಧಿಕಾರ ಅಥವಾ ಸವಲತ್ತು ಏನೇ ಇರಲಿ,ಕಾನೂನಿನೆದುರು ಎಲ್ಲರೂ ಸಮಾನರು” ಎಂದು ಸುಪ್ರೀಂ ಕೋರ್ಟ್ ಹೇಳಿದೆ. “ಆರೋಪಿ ಯಾರೇ ಆಗಿರಲಿ,ಆರೋಪಿ ದೊಡ್ಡವನಿರಲಿ ಅಥವಾ ಚಿಕ್ಕವನಿರಲಿ ಅವನು ಅಥವಾ ಅವಳು ಯಾರೇ ಇರಲಿ ಕಾನೂನಿಗೆ ಮಿರಿಲ್ಲ ಎಂಬ ಬಲವಾದ ಸಂದೇಶವನ್ನು ಈ ತೀರ್ಪು ನೀಡುತ್ತದೆ” ಎಂದು ನ್ಯಾಯಮೂರ್ತಿ ಪೆರ್ದಿವಾಲಾ ಹೇಳಿದರು.