ನಟ ದರ್ಶನ್, ಪವಿತ್ರ ಗೌಡ ಸೇರಿ 7 ಮಂದಿಗೆ ಜಾಮೀನು ಮಂಜೂರು

Kranti Deepa

ಬೆಂಗಳೂರು,ಡಿ.13  : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಟ ದರ್ಶನ್ ಗೆ ಹೈಕೋರ್ಟ್ ಇಂದು ಜಾಮೀನು ಮಂಜೂರು ಮಾಡಿದೆ.

ದರ್ಶನ್ ಮಾತ್ರವಲ್ಲದೇ ಮೊದಲ ಆರೋಪಿ ಪವಿತ್ರಾ ಗೌಡ ಸೇರಿ 7 ಆರೋಪಿಗಳಿಗೂ ಹೈಕೋರ್ಟ್ ಜಾಮೀನು ಮಂಜೂರು ಮಾಡಲಾಗಿದೆ.

ಬೆನ್ನುನೋವಿನಿಂದ ಶಸ್ತ್ರ ಚಿಕಿತ್ಸೆಗೆ ಒಳಗಾದ ನಟ ದರ್ಶನ್ ಘಟನೆ ನಡೆದ 6 ತಿಂಗಳ ಬಳಿಕ ದರ್ಶನ್ ಗೆ ಜಾಮೀನು ಮಂಜೂರಾಗಿದೆ.

ಇತ್ತೀಚೆಗೆ ದರ್ಶನ್ ಗೆ ಬೆನ್ನುನೋವು ಇದ್ದ ಕಾರಣ ಶಸ್ತ್ರಚಿಕಿತ್ಸೆಗೆ ಒಳಗಾಗಬೇಕಿರುವ ಹಿನ್ನೆಲೆಯಲ್ಲಿ ವೈದ್ಯಕೀಯ ಕಾರಣಗಳಿಗಾಗಿ ಮಧ್ಯಂತರ ಜಾಮೀನು ಮಂಜೂರು ಮಾಡಲಾಗಿತ್ತು

Share This Article
";