ಬೆಂಗಳೂರು,ಜ. 09 : 16 ನೇ ಬೆಂಗಳೂರು ಅಂತರರಾಷ್ಟ್ರೀಯ ಚಲನ ಚಿತ್ರೋತ್ಸವದ ರಾಜಭಾರಿಯನ್ನಾಗಿ ಖ್ಯಾತ ನಟ ಕಿಶೋರ್ ಕುಮಾರ್ ಜಿ. ಅವರನ್ನು ಆಯ್ಕೆ ಮಾಡಲಾಗಿದೆ.
ಈ ಸಂಬಂಧ ಸರ್ಕಾರ ಆದೇಶ ಹೊರಡಿಸಿದೆ. ಕಿಶೋರ್ ಅವರು ಹಿಂದಿ ಹಾಗೂ ದಕ್ಷಿಣ ಭಾರತದ ಎಲ್ಲ ಭಾಷೆಗಳಲ್ಲಿಯೂ ನಟಿಸಿ ಜನಪ್ರಿಯತೆ ಗಳಿಸಿ ದ್ದಾರೆ.
ಮಾರ್ಚ್ 1 ರಿಂದ 8 ರವರೆಗೆ ಬೆಂಗಳೂರಿನಲ್ಲಿ ನಡೆಯುವ ಚಿತ್ರೋತ್ಸವಕ್ಕೆ ಹೆಚ್ಚಿನ ಪ್ರಚಾರ ತಂದು ಕೊಡುವ ಸಲುವಾಗಿ ಅವರನ್ನು ರಾಯಭಾರಿಯನ್ನಾಗಿ ನೇಮಕ ಮಾಡಲಾಗಿದೆ ಎಂದು ತಿಳಿಸಿದೆ.
ಈ ಸಾಲಿನ ಚಲನ ಚಿತ್ರೋತ್ಸವವು ‘ಸರ್ವ ಜನಾಂಗದ ಶಾಂತಿಯ ತೋಟ’ ಶೀರ್ಷಿಕೆಯಡಿ ನಡೆಯಲಿದೆ. ಸುಮಾರು ೬೦ ದೇಶಗಳ ಸಿನಿಮಾಗಳು, ಚಿತ್ರೋತ್ಸವದಲ್ಲಿ ಭಾಗವಹಿಸಲಿವೆ. ಕನ್ನಡ ಸೇರಿದಂತೆ ವಿವಿಧ ಭಾಷೆಗಳ 200 ಚಲನಚಿತ್ರಗಳು 13 ಚಿತ್ರಮಂದಿರಗಳಲ್ಲಿ 400 ಪ್ರದರ್ಶನಗೊಳ್ಳಲಿವೆ.