ಬೆಂಗಳೂರು,ಆ.22 : ಆಗಸ್ಟ್ 26 ಮತ್ತು 27 ರಂದು ಗೌರಿ – ಗಣೇಶ ಹಬ್ಬ ಆಚರಿಸಲು ಜನ ಭಾರಿ ಸಂಖ್ಯೆಯಲ್ಲಿ ಬೆಂಗಳೂರಿನಿಂದ ತಮ್ಮ ಊರುಗಳಿಗೆ ಹೋಗಲು ಸಜ್ಜಾಗಿದ್ದು, ಜನದಟ್ಟಣೆ ತಪ್ಪಿಸಲು ಮತ್ತು ಪ್ರಯಾಣಿಕರ ಅನುಕೂಲಕ್ಕಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ರಾಜ್ಯದಾದ್ಯಂತ ವಿವಿಧ ಸ್ಥಳಗ ಳಿಗೆ 1,500 ವಿಶೇಷ ಬಸ್‌ಗಳನ್ನು ಓಡಿಸುವುದಾಗಿ ಶುಕ್ರವಾರ ಪ್ರಕಟಿಸಿದೆ.ನಿಯಮಿತ ವೇಳಾಪಟ್ಟಿಗಳ ಜೊತೆಗೆ, ಆಗಸ್ಟ್ ೩೧ ರಂದು ಭಾನುವಾರ ವಿಶೇಷ ಬಸ್ ಗಳನ್ನು ಸಹ ಒದಗಿಸಲಾಗುವುದು ಎಂದು ಕೆಎಸ್‌ಆರ್‌ಟಿಸಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.
ಗೌರಿ- ಗಣೇಶ ಹಬ್ಬಕ್ಕೆ ಹೆಚ್ಚುವರಿ ಬಸ್
