ಚಿತ್ರದುರ್ಗ,ಅ.07: ಪೋಕ್ಸೋ ಪ್ರಕರಣದಲ್ಲಿ ಜೈಲು ಸೇರಿದ್ದ ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಸ್ವಾಮೀಜಿ ಬಿಡುಗಡೆ ಯಾಗಿ ಜೈಲಿನಿಂದ ಹೊರಬಂದಿದ್ದಾರೆ.
ಚಿತ್ರದುರ್ಗದ 2 ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾ ಲಯ ಪ್ರಕರಣಕ್ಕೆ ಸಂಬಂಧಪಟ್ಟ ಸಾಕ್ಷ್ಯಗಳ ವಿಚಾರಣೆ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ಜೈಲಿನಿಂದ ಬಿಡುಗಡೆ ಮಾಡುವಂತೆ ಆದೇಶವನ್ನು ಹೊರಡಿಸಿತ್ತು. ಈ ಹಿಂದೆ ಹೈಕೋರ್ಟ್ ಮುರುಘಾಶ್ರೀಗೆ ಷರತ್ತುಬದ್ಧ ಜಾಮೀನು ನೀಡಿತ್ತು. ಆದರೆ, ಸಾಕ್ಷಗಳ ವಿಚಾರಣೆ ಮುಗಿಯುವವರೆಗೂ ಬಂಧನದಲ್ಲಿಡಲು ಸುಪ್ರೀಂಕೋರ್ಟ್ ಕಳೆದ ಏಪ್ರಿಲ್ ೨೩ರಂದು ಆದೇಶಿಸಿತ್ತು. ಈ ಹಿನ್ನೆಲೆಯಲ್ಲಿ ಜಾಮೀನು ಸಿಕ್ಕರೂ ಶ್ರೀಗಳು ಜೈಲಿಗೆ ಮತ್ತೆ ಹೋಗಬೇಕಾಗಿ ಬಂದಿತ್ತು.