ಬೆಂಗಳೂರು, ,ಜೂ.13 : ಇತ್ತೀಚೆಗೆ ಮದ್ಯಪಾನ ಯುವಜನರಲ್ಲಿ ಹೆಚ್ಚುತ್ತಿದ್ದು, ಇದರಿಂದ ಅಪಘಾತಗಳು ದಿನದಿಂದ ದಿನಕ್ಕೆ ಜಾಸ್ತಿಯಾಗುತ್ತಲೇ ಇದೆ. ಮದ್ಯಪಾನ ಸೇವನೆಯ ಬಗ್ಗೆ ಎಷ್ಟೇ ಅರಿವು ಮೂಡಿಸಿದರು ಯುವಜನರು ಮಾತ್ರ ಮದ್ಯಕ್ಕೆ ದಾಸರಾಗುತ್ತಿದ್ದಾರೆ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದ್ದಾರೆ.
ಕರ್ನಾಟಕದಲ್ಲಿ, ಮದ್ಯಪಾನ ಮಾಡಲು ಮತ್ತು ಖರೀದಿಸಲು ಕಾನೂನುಬದ್ಧ ವಯಸ್ಸು 21 ವರ್ಷಗಳು ಆಗಿರಲೇಬೇಕು. 21 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಮದ್ಯ ಮಾರಾಟ ಮಾಡುವುದು ಅಥವಾ ಮದ್ಯಪಾನ ಮಾಡಲು ಅನುಮತಿ ನೀಡುವುದು ಕಾನೂನುಬಾಹಿರವಾಗಿದ್ದು, ತಪ್ಪಿದ್ದಲ್ಲಿ, ಪರವಾನಗಿ ಪಡೆದ ಸಂಸ್ಥೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸರ್ಕಾರ ಎಚ್ಚರಿಕೆ ನೀಡಿದೆ.
ಮದ್ಯ ಮಾರಾಟ ಮಾಡುವ ಸಂಸ್ಥೆಗಳು ಪ್ರತಿಯೊಬ್ಬರ ಗುರುತಿನ ಚೀಟಿ (ID) ಪರಿಶೀಲಿಸಿ ಸಂಗ್ರಹಿಸಬೇಕೆಂಬ ನಿಯಮ ಇಲ್ಲ. ಆದರೆ 21 ವರ್ಷಕ್ಕಿಂತ ಕಡಿಮೆ ವಯಸ್ಸಿನಂತೆ ಕಾಣುವವರ ಗುರುತಿನ ಚೀಟಿ ಪರಿಶೀಲಿಸಿ, ಅವರು ವಯಸ್ಕರೊಂದಿಗೆ ಬಂದಿದ್ದರೂ ಮದ್ಯ ಸೇವನೆಗೆ ಅವಕಾಶ ನೀಡಬಾರದು.
ತಮ್ಮ ಮಾರಾಟ ಮತ್ತು ಸೇವನೆಯ ಸ್ಥಳದಲ್ಲಿ ಹದಿಹರೆಯದವರು ಮದ್ಯಪಾನ ಮಾಡುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ ಎಂದು ಸಂಸ್ಥೆಗಳು ಖಚಿತಪಡಿಸಿಕೊಳ್ಳಬೇಕು. ಯಾವುದೇ ನಿರ್ಲಕ್ಷ್ಯ ಕಂಡುಬಂದರೆ ಗಂಭೀರ ಕ್ರಮ ಎದುರಿಸಬೇಕಾಗುತ್ತದೆ.
