ಬೆಂಗಳೂರು,ಮೇ, 27 : ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ ಅವರನ್ನು ಅರಣ್ಯ ಮತ್ತು ವನ್ಯಜೀವಿ ರಾಯಭಾರಿಯಾಗಿ ನಾಮ ನಿರ್ದೇಶನ ಮಾಡಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಬಿ ಖಂಡ್ರೆ ಮಂಗಳವಾರ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಖಂಡ್ರೆ, ಈ ಹಿಂದೆ ಕರ್ನಾಟಕ ವನ್ಯಜೀವಿ ಮಂಡಳಿಯ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ ಅನಿಲ್ ಕುಂಬ್ಳೆ ಅವರು, ವಿಶ್ವದಾದ್ಯಂತ ಖ್ಯಾತಿ ಹೊಂದಿದ್ದು, ಅರಣ್ಯ ಸಂರಕ್ಷಣೆ, ಅರಣ್ಯ ಅಭಿವೃದ್ಧಿ, ಮರಗಳ ಸಂರಕ್ಷಣೆ ಮತ್ತು ವನ್ಯಜೀವಿ ಸಂರಕ್ಷಣೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ನೆರವಾಗುತ್ತಾರೆ ಎಂದರು.