ಚೆನ್ನೈ,ಡಿ.26 : ತಮಿಳುನಾಡು ರಾಜ್ಯದಲ್ಲಿ ಡಿಎಂಕೆ ಅಧಿಕಾರದಿಂದ ಕೆಳಗಿಳಿಯುವ ವರೆಗೂ ಶೂ ಧರಿಸುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಪ್ರತಿಜ್ಞೆ ಮಾಡಿದ್ದಾರೆ.
ಅಣ್ಣಾ ವಿಶ್ವವಿದ್ಯಾನಿಲಯದ ವಿದ್ಯಾರ್ಥಿನಿಯ ಲೈಂಗಿಕ ಕಿರುಕುಳ ಪ್ರಕರಣವನ್ನು ಸರ್ಕಾರ ನಿರ್ವಹಿಸಿದ ರೀತಿಯನ್ನು ವಿರೋಸಿ ಶುಕ್ರವಾರ ನಮ್ಮ ಮನೆಯ ಮುಂದೆಯೇ ಆರು ಬಾರಿ ಚಾಟಿಯೇಟು ಹೊಡೆದು ಕೊಳ್ಳುವ ಮೂಲಕ ಪ್ರತಿಭಟನೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಈ ಪ್ರಕರಣದಲ್ಲಿ ತಮಿಳುನಾಡು ಪೊಲೀಸರು ಸಂತ್ರಸ್ತೆಯ ಹೆಸರು, ಫೋನ್ ಸಂಖ್ಯೆ ಮತ್ತು ಇತರ ವೈಯಕ್ತಿಕ ವಿವರಗಳನ್ನು ಸಾರ್ವಜನಿಕಗೊಳಿಸಿದ್ದಾರೆ ಎಂದು ಅಣ್ಣಾಮಲೈ ಆರೋಪಿಸಿದ್ದಾರೆ.