ಆಟೋ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ: ಒಂದೇ ಕುಟುಂಬದ ಐವರು ಸಾವು

Kranti Deepa
ಮಂಗಳೂರು, ಆ.28 : ಆಟೋಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿಯಾಗಿ  ಒಂದೇ ಕುಟುಂಬದ ಐವರು ಸಾವನ್ನಪ್ಪಿರುವ ಘಟನೆ ಮಂಗಳೂರಿನ ಹೊರವಲಯದಲ್ಲಿ ನಡೆದಿದೆ.
ಕರ್ನಾಟಕ-ಕೇರಳ ಗಡಿ ಭಾಗದ ತಲಪಾಡಿಯಲ್ಲಿ ಈ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಒಂದು ಮಗು ಸೇರಿ ಮೂವರು ಮಹಿಳೆಯರು ಓರ್ವ ಪುರುಷ ಸಾವನ್ನಪ್ಪಿದ್ದು,  7 ಮಂದಿ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಕೆಎಸ್ ಆರ್ ಟಿಸಿ ಬಸ್ ನ ಬ್ರೇಕ್ ಫೇಲ್ ಆಗಿ ಬಸ್ ಆಟೋಗೆ ಡಿಕ್ಕಿಯಾಗಿ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ.

Share This Article
";