ಶಿವಮೊಗ್ಗ: ಸರ್ಕಾರಿ ಭೂಮಿಯಲ್ಲಿ ಅಕ್ರಮವಾಗಿ ದಾಸ್ತಾನು ಮಾಡಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಬೀಟೆ ಮರದ ತುಂಡುಗಳನ್ನು ಸಾಗರ ವಿಭಾಗದ ಅರಣ್ಯಾಧಿಕಾರಿಗಳು ಭಾನುವಾರ ವಶಪಡಿಸಿಕೊಂಡಿದ್ದಾರೆ.
ಸಾಗರ ಉಪ ಅರಣ್ಯ ಸಂರಕ್ಷಣಾಧಿಕಾರಿ ಮೋಹನ್ ಕುಮಾರ್ ಸೂಚನೆಯ ಮೇರೆಗೆ, ಕೆಳದಿಯ ಮರಸ ಗ್ರಾಮದ ಸರ್ಕಾರಿ ಜಾಗದಲ್ಲಿದ್ದ ಬೀಟೆ ದಿಮ್ಮಿಗಳನ್ನು ವಶಕ್ಕೆ ಪಡೆಯಲಾಗಿದೆ.
ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ರವಿ ಮಾರ್ಗದರ್ಶನದಲ್ಲಿ, ವಲಯ ಅರಣ್ಯಾಧಿಕಾರಿ ಅಣ್ಣಪ್ಪ ಬಿ. ಹಾಗೂ ಸಿಬ್ಬಂದಿ ದಾಳಿ ಮಾಡಿದ್ದಾರೆ.
1.569 ಘನ ಮೀಟರ್ ಅಕ್ರಮ ಬೀಟೆ ಜಪ್ತಿ ಮಾಡಲಾಗಿದೆ. ಸರ್ಕಾರಿ ಭೂಮಿಯಲ್ಲಿ ಅಕ್ರಮವಾಗಿ ದಾಸ್ತಾನು ಮಾಡಿರುವ ಸಂಬಂಧ ಪ್ರಕರಣ ದಾಖಲಾಗಿದೆ. ದಾಸ್ತಾನು ಮಾಡಿದ್ದು ಯಾರು ಎನ್ನುವ ಬಗ್ಗೆ ತನಿಖೆ ನಡೆಯುತ್ತಿದೆ. ಆರೋಪಿಗಳನ್ನು ಶೀಘ್ರವೇ ಬಂಧಿಸುವುದಾಗಿ ಅರಣ್ಯ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.
ಕೆಳದಿ ಉಪವಲಯ ಅರಣ್ಯಾಧಿಕಾರಿ ವಿಜಯಕುಮಾರ್ ಜೆ, ಸಾಗರ ಶಾಖೆಯ ಅಶೋಕ ಅಯ್ಯನಹಳ್ಳಿ, ಗಸ್ತು ಅರಣ್ಯ ಪಾಲಕ ಯುವರಾಜ ಕೆ.ಆರ್., ಮಹೇಶ್ ಜಕ್ಕಳ್ಳಿ, ಶಿವನಗೌಡ ದಾಳಿಯಲ್ಲಿ ಭಾಗವಹಿಸಿದ್ದರು.