ತೀರ್ಥಹಳ್ಳಿ,ಅ.18: ತಾಲೂಕಿನ ಬೆಜ್ಜವಳ್ಳಿಯ ಮುಖ್ಯರಸ್ತೆಯಲ್ಲಿ ಖಾಸಗಿ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಮೃತ ಪಟ್ಟ ಘಟನೆ ವರದಿಯಾಗಿದೆ.
ಮೃತ ಪಟ್ಟ ಬೈಕ್ ಸವಾರ ಯುವಕ ಕನ್ನಂಗಿಯ ಕವಟುಮನೆಯ ಪ್ರಥಮ್( 16 ) ಡಿಪ್ಲೋಮೊ ವಿಧ್ಯಾರ್ಥಿ ಎನ್ನಲಾಗಿದೆ.
ಶಿವಮೊಗ್ಗದಿಂದ ತೀರ್ಥಹಳ್ಳಿ ಕಡೆಗೆ ಬರುತ್ತಿದ್ದ ಖಾಸಗಿ ಬಸ್ ಹಾಗೂ ಬೆಜ್ಜವಳ್ಳಿಯಿಂದ ತೀರ್ಥಹಳ್ಳಿ ಕಡೆಗೆ ಕಾಲೇಜಿಗೆ ಹೊರಟಿದ್ದ ಯುವಕನ ಬೈಕ್ ನಡುವೆ ಈ ಅಪಘಾತ ಸಂಭವಿಸಿದೆ.
ಗಂಭೀರವಾಗಿ ಗಾಯಗೊಂಡ ಬೈಕ್ ಸವಾರನನ್ನು ಮಣಿಪಾಲ್ ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗ ಮಧ್ಯದಲ್ಲಿ ಮೃತಪಟ್ಟಿದ್ದಾನೆ.
ಈ ಅಪಘಾತದ ಸಂಬಂಧ ಮಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.