ಶಿವಮೊಗ್ಗ, ಆ.14 : ಶೇಷಾದ್ರಿಪುರಂ ಫ್ಲೈ ಓವರ್ ಕೆಳಗೆ ನಿಲ್ಲಿಸಿದ್ದ ಹೋಂಡಾ ಡಿಯೋ ದ್ವಿಚಕ್ರ ವಾಹನ ಕಳ್ಳತನವಾಗಿದೆ. ಕುವೆಂಪು ನಗರದ ಹನುಮಂತಪ್ಪ ಎಂಬುವವರು ತಮ್ಮ ಬೈಕ್ ಅನ್ನು ಫ್ಲೈ ಓವರ್ ಕೆಳಗೆ ನಿಲ್ಲಿಸಿ ಕೆಲಸಕ್ಕೆ ತೆರಳಿದ್ದರು. ಕೆಲಸ ಮುಗಿಸಿ ರಾತ್ರಿ ಮರಳಿದಾಗ ಬೈಕ್ ಇರಲಿಲ್ಲ. ಎಲ್ಲೆಡೆ ಹುಡುಕಿದರು ಸಿಗದ ಹಿನ್ನೆಲೆ ಕೋಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಇನ್ನೊಂದು ಘಟನೆಯಲ್ಲಿ ಮೆಗ್ಗಾನ್ ಆಸ್ಪತ್ರೆಯ ಪಾರ್ಕಿಂಗ್ ಸ್ಥಳದಲ್ಲಿ ನಿಲ್ಲಿಸಿದ್ದ ಬೈಕ್ ಕಳ್ಳತನವಾಗಿದೆ ಎಂದು ಆರೋಪಿಸಿ ರೈತರೊಬ್ಬರು ದೊಡ್ಡಪೇಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಹೊಸನಗರ ತಾಲೂಕಿನ ಕೃಷ್ಣಮೂರ್ತಿ ಅವರ ಬಜಾಜ್ ಪ್ಲಾಟೀನ ಬೈಕ್ ಕಳುವಾಗಿದೆ.
ಮೆಗ್ಗಾನ್ ಆಸ್ಪತ್ರೆಗೆ ತೆರಳಿದ್ದ ಕೃಷ್ಣಮೂರ್ತಿ ತಮ್ಮ ಬೈಕ್ ಅನ್ನು ಪಾರ್ಕಿಂಗ್ ಸ್ಥಳದಲ್ಲಿ ನಿಲ್ಲಿಸಿದ್ದರು. ಆಸ್ಪತ್ರೆಯ ಒಳಗೆ ನರ್ಸ್ ಒಬ್ಬರನ್ನು ಭೇಟಿಯಾಗಿ ಹಿಂತಿರುಗಿದಾಗ ಬೈಕ್ ನಾಪತ್ತೆಯಾಗಿತ್ತು ಎಂದು ದೂರಿನಲ್ಲಿ ಹೇಳಿದ್ದಾರೆ.