ಶಿವಮೊಗ್ಗ: ಶಾಸಕ ಜನಾರ್ದನ ರೆಡ್ಡಿ ವಿರುದ್ದ ಮುನಿಸಿಕೊಂಡು ಬಿಜೆಪಿ ನಾಯಕರ ವಿರುದ್ದ ಅಸಮಾಧಾನಗೊಂಡಿರುವ ಮಾಜಿ ಸಚಿವ ಶ್ರೀರಾಮುಲುರನ್ನು ತೆರೆಮರೆಯಲ್ಲಿ ಕಾಂಗ್ರೆಸ್ ಸೆಳೆಯುವ ಪ್ರಯತ್ನ ಮಾಡುತ್ತಿದೆ ಎಂಬ ಸುದ್ದಿಗಳು ಹಬ್ಬಿರುವ ಹಿನ್ನೆಲೆಯಲ್ಲಿ ಈ ಕುರಿತು ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.
ಶಿವಮೊಗ್ಗದಲ್ಲಿ ಶುಕ್ರವಾರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಯಾರ ಒಳಜಗಳ ನಂಬಿ ನಾವು ರಾಜಕಾರಣ ಮಾಡುತ್ತಿಲ್ಲ. ಜನರ ನಂಬಿಕೆ ಉಳಿಸಿಕೊಂಡು ಹೋಗುವುದು ಮುಖ್ಯ. ತಮ್ಮಲ್ಲಿರುವ ಒಳ ಜಗಳ ಮುಚ್ಚಿಕೊಳ್ಳಲು ಕಾಂಗ್ರೆಸ್ ಮೇಲೆ ಬಿಜೆಪಿ ಆರೋಪ ಮಾಡುತ್ತಿದೆ ಎಂದು ಟಾಂಗ್ ಕೊಟ್ಟರು.
ಜನರು ಬಿಜೆಪಿಯನ್ನು ವಿಪಕ್ಷದಲ್ಲಿ ಕೂರಿಸಿದ್ದಾರೆ. ಬಿಜೆಪಿಗೆ ಅಧಿಕಾರ ನೀಡಿದಾಗ ಅನುಭವ ಇರಲಿಲ್ಲ ಎಂದು ಡಿಕೆ ಶಿವಕುಮಾರ್ ಹೇಳಿದರು.