ಬಾಂಬ್ ಬೆದರಿಕೆ:  ಪ್ರಕರಣ ದಾಖಲು

Kranti Deepa
ಮೈಸೂರು,ಮೇ.02 : ನಗರದ ವಿವಿಧ ಸ್ಥಳಗಳಲ್ಲಿ ಬಾಂಬ್ ಇಟ್ಟಿದ್ದೇವೆ’ ಎಂದು ನಗರ ಪೊಲೀಸ್ ಆಯುಕ್ತರ ಕಚೇರಿಗೆ ಅನಾಮಧೇಯ ವ್ಯಕ್ತಿಯು ಇ – ಮೇಲ್ ಕಳಿಸಿದ್ದು, ನಜರ್ಬಾದ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿವಿಧ ಸ್ಥಳಗಳಲ್ಲಿ ಬಾಂಬ್ ಇರಿಸಿದ್ದೇವೆ ಎಂಬ ಬರವಣಿಗೆಯುಳ್ಳ ಮೇಲ್ ಬಂದಿತ್ತು. ತಕ್ಷಣವೇ ಬಾಂಬ್ ನಿಷ್ಕ್ರೀಯ ದಳ ಹಾಗೂ ಶ್ವಾನ ದಳದ ಮೂಲಕ ನಗರದ ಪ್ರಮುಖ ಸ್ಥಳಗಳಲ್ಲಿ ತಪಾಸಣೆ ನಡೆಸಲಾಗಿದೆ. ಆಯಾಯ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಇನ್ಸ್ ಪೆಕ್ಟರ್‌ಗಳ ನೇತೃತ್ವದಲ್ಲಿ ಪರಿಶೀಲನೆ ನಡೆಸಲಾಗಿದೆ.
ಬಾಂಬ್ ಇಟ್ಟಿರುವುದು ಕಂಡುಬಂದಿಲ್ಲ’ ಎಂದು ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್ ತಿಳಿಸಿದರು.ಲಾಡ್ಜ್, ಬಸ್ ನಿಲ್ದಾಣ, ಮಾರುಕಟ್ಟೆ, ಹೋಟೆಲ್ ಮುಂತಾದ ಸಾರ್ವಜನಿಕರು ಸೇರುವ ಸ್ಥಳಗಳಲ್ಲಿ ಭದ್ರತೆ ಹೆಚ್ಚಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡು, ಸೈಬರ್ ಠಾಣೆಯ ಸಹಾಯದಲ್ಲಿ ಮೇಲ್ ಕಳಿಸಿದವರು ಯಾರೆಂಬುದನ್ನು ಪತ್ತೆಹಚ್ಚಲು ತನಿಖೆ ಮುಂದು ವರೆಸಿದ್ದೇವೆ ಎಂದು ತಿಳಿಸಿದರು.

Share This Article
";