ಶಿವಮೊಗ್ಗ, ಜೂ .09 : ಮೂರು ದ್ವಿಚಕ್ರ ವಾಹನಗಳಲ್ಲಿ ಬಂದಿದ್ದ ಯುವಕರ ಗುಂಪೊಂದು ರಹಮತ್ ಉಲ್ಲಾ (ಡಾಲರ್) ಹಾಗೂ ನ್ಯಾಮತ್ ಉಲ್ಲಾ ಸಹೋದರರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ ಘಟನೆ ಮಂಗಳವಾರ ಸಂಜೆ ತುಂಗಾನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಹಲ್ಲೆಯಲ್ಲಿ ಗಾಯಗೊಂಡ ಇಬ್ಬರನ್ನು ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.ನಗರದ ಟಿಪ್ಪುನಗರದ ಗೌಸಿಯಾ ಸರ್ಕಲ್ ಸಮೀಪ ಈ ಘಟನೆ ನಡೆದಿದ್ದು, ಮಿಳಘಟ್ಟದ ಆಸಿಫ್ ಹಾಗೂ ಇತರ ಕೆಲ ಯುವಕರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.
ಈ ಕುರಿತು ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.
