ಶಿವಮೊಗ್ಗದ ಕಾಂಗ್ರೆಸ್ ಮುಖಂಡರುಗಳಿಂದ ನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ್ ಇವರಿಗೆ ಅಭಿನಂದನೆ

Kranti Deepa

ಬೆಂಗಳೂರು, ಜೂ. 5: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ಇವರನ್ನು ಮಲೆನಾಡು ಪ್ರದೇಶ ಅಭಿವೃದ್ಧಿ ಮಂಡಳಿ ಹಾಗೂ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಆರ್ ಎಂ ಮಂಜುನಾಥಗೌಡ ಇವರ ನೇತೃತ್ವದಲ್ಲಿ  ಶಿವಮೊಗ್ಗದ ಮುಖಂಡರುಗಳು ಇಂದು ಅವರ ನಿವಾಸದಲ್ಲಿ ಭೇಟಿ ಮಾಡಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ  ಎಂ ಶ್ರೀಕಾಂತ್, ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷರಾದ ಎಂ ರಮೇಶ್ ಶಂಕರಘಟ್ಟ. ಕಾಂಗ್ರೆಸ್ ಮುಖಂಡರಾದ ಸುಬ್ಬಣ್ಣ ಮಾಸ್ತಿಕಟ್ಟೆ ಮೊದಲಾದವರು ಇದ್ದರು.

Share This Article
";