ಬೆಂಗಳೂರು, ಅ.23: ಕೆಪಿಸಿಸಿ ಕಚೇರಿಯಲ್ಲಿ ಇಂದು ಸಿ.ಪಿ. ಯೋಗೇಶ್ವರ್ ಅವರು ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್ ಸಮ್ಮುಕ್ಕದಲ್ಲಿ ಕಾಂಗ್ರೆಸ್ ಸೇರ್ಪಡೆ ಗೊಂಡರು.
ನಂತರ ಮಾತನಾಡಿದ ಡಿಕೆ ಶಿವಕುಮಾರ್ ಅವರು ರಾಜಕೀಯದಲ್ಲಿ ಏನು ಬೇಕಾದರೂ ಆಗಬಹುದು ಎಂಬುದಕ್ಕೆ ಇದೆ ಉದಾಹರಣೆ ಯೋಗೇಶ್ ಮತ್ತೆ ಮರಳಿ ಮಾತೃ ಪಕ್ಷಕ್ಕೆ ಬಂದಿದ್ದಾರೆ.
ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆ ಚರ್ಚಿಸಿ ವರಿಷ್ಠರ ಗಮನಕ್ಕೆ ತಂದು ಕಾಂಗ್ರೆಸ್ ಸೇರ್ಪಡೆ ಮಾಡಿಕೊಳ್ಳಲಾಗಿದೆ ಎಂದರು.
ಈ ಸಂದರ್ಭದಲ್ಲಿ ರಾಮಲಿಂಗಾ ರೆಡ್ಡಿ,ಜಮೀರ್ ಅಹಮದ್,ಚೆಲುವರಾಯಸ್ವಾಮಿ,ಡಿ.ಕೆ.ಸುರೇಶ್ ಸೇರಿದಂತೆ ಅನೇಕ ಮುಖಂಡರಿದ್ದರು.