ಶಿವಮೊಗ್ಗ,ಮೇ .29 : ಮಲೆನಾಡು ಭಾಗದ ಜನತೆಗೆ ನ್ಯಾಯಾಂಗ ಸೇವೆಗಳು ಸುಲಭವಾಗಿ ಹಾಗೂ ಶೀಘ್ರವಾಗಿ ದೊರಕುವ ಉದ್ದೇಶದಿಂದ ಶಿವಮೊಗ್ಗದಲ್ಲಿ ಹೈಕೋರ್ಟ್ ಸರ್ಕ್ಯೂಟ್ ಬೆಂಚ್ ಸ್ಥಾಪನೆ ಅಗತ್ಯವಾಗಿದೆ ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ ಹೇಳಿದರು.
ಜಿಲ್ಲಾ ವಕೀಲರ ಸಂಘ ಶಿವಮೊಗ್ಗ ವತಿಯಿಂದ ಶಿವಮೊಗ್ಗದಲ್ಲಿ ಹೈಕೋರ್ಟ್ ಸರ್ಕ್ಯೂಟ್ ಬೆಂಚ್ ಸ್ಥಾಪನೆಗೆ ಆಗ್ರಹಿಸಿ ಬೃಹತ್ ಹೋರಾಟ ಕಾರ್ಯಕ್ರಮ ಬೆಂಬಲಿಸಿ ಮಾತನಾಡಿದ ಅವರು, ಮಧ್ಯ ಕರ್ನಾಟಕ ಭಾಗದಲ್ಲಿ ಬೆಂಚ್ ಸ್ಥಾಪನೆಯಿಂದ ಹತ್ತಾರು ಜಿಲ್ಲೆಗಳಿಗೆ ಅನುಕೂಲವಾಗಲಿದ್ದು, ಈ ಹಿನ್ನೆಲೆಯಲ್ಲಿ ಶಿವಮೊಗ್ಗದಲ್ಲಿ ಹೈ ಕೋರ್ಟ್ ಸಂಚಾರಿ ಪೀಠ ಸ್ಥಾಪನೆಯಾಗಲೇ ಬೇಕು ಎಂದರು.
ಈ ಸಂದರ್ಭದಲ್ಲಿ ಬಾರ್ ಅಸೋಸಿಯೇಷನ್ ಅಧ್ಯಕ್ಷ ರಾಘವೇಂದ್ರ, ರೈತ ಮುಖಂಡರಾದ ಗಂಗಾಧರ್ ಗೌಡ್ರು, ಬಸಪ್ಪಗೌಡ್ರು, ಪದವೀಧರ ಸಹಕಾರ ಸಂಘದ ಅಧ್ಯಕ್ಷ ಎಸ್.ಪಿ.ದಿನೇಶ್, ನೌಕರರ ಸಂಘದಜಿಲ್ಲಾಧ್ಯಕ್ಷರಾದ ಆರ್ ಮೋಹನ್ ಕುಮಾರ್, ಕಾರ್ಯದರ್ಶಿಗಳಾದ ಆರ್ ಪಾಪಣ್ಣ, ಎಸ್.ಪಿ. ದಿನೇಶ್ ವಿವಿಧ ಸಂಘ ಸಂಸ್ಥೆಗಳ ಮುಖಂಡರು ಉಪಸ್ಥಿತರಿದ್ದರು.
