ಉಪ ನಿರ್ದೇಶಕರಾಗಿ ಶಿವಮೊಗ್ಗಕ್ಕೆ ಸಿ.ಎಸ್.ಷಡಾಕ್ಷರಿ ವರ್ಗಾವಣೆ

Kranti Deepa
ಬೆಂಗಳೂರು,ಜೂ.18 : ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ  ಹಾಗೂ ಬೆಂಗಳೂರಿನ ಲೆಕ್ಕ ಪರಿಶೋಧನಾ ಇಲಾಖೆಯಲ್ಲಿ ಉಪ ನಿರ್ದೇಶಕರಾಗಿದ್ದ ಸಿ.ಎಸ್.ಷಡಾಕ್ಷರಿರವರನ್ನು  ಶಿವಮೊಗ್ಗಕ್ಕೆ ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ಬೆಂಗಳೂರಿನ ಲೆಕ್ಕ ಪರಿಶೋಧನಾ ಇಲಾಖೆಯ ಜಂಟಿ ನಿರ್ದೇಶಕರ ಕಚೇರಿಯಲ್ಲಿ ಸೇವೆ ಸಲ್ಲಿಸುತ್ತಿದ್ದ ಇವರನ್ನ ಶಿವಮೊಗ್ಗಕ್ಕೆ ವರ್ಗಾವಣೆ ಮಾಡಲಾಗಿದ್ದು, ಗುರುವಾರ ಷಡಾಕ್ಷರಿ  ಜಂಟಿ ನಿರ್ದೇಶಕರು ಸ್ಥಳೀಯ ಲೆಕ್ಕ ಪರಿಶೋಧನಾ ವರ್ತುಲ ಶಿವಮೊಗ್ಗ ಇಲ್ಲಿ ಇಂದು ಅಕಾರ ಸ್ವೀಕರಿಸಿದರು.
ಸರ್ಕಾರಿ ನೌಕರರ ಸಂಘದ ಚುನಾವಣೆ ಸಂದರ್ಭದಲ್ಲಿ ಇವರನ್ನು ಶಿವಮೊಗ್ಗದಿಂದ ಕೋಲಾರಕ್ಕೆ ವರ್ಗಾವಣೆ ಮಾಡಲಾಗಿತ್ತು. ನಂತರ ಇವರನ್ನು ಬೆಂಗಳೂರಿನ ಕೇಂದ್ರ ಕಚೇರಿಗೆ ವರ್ಗಾವಣೆ ಮಾಡಲಾಯಿತು. ಇದೀಗ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ರವರ ಸೂಚನೆ ಮೇರೆಗೆ ಸರ್ಕಾರದ ಕಾರ್ಯದರ್ಶಿಗಳು ಈ ಆದೇಶ ಮಾಡಿದ್ದಾರೆ.
ಷಡಾಕ್ಷರಿಯವರು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ರವರ ಜೊತೆ ಇರುವ ವಿಶ್ವಾಸದ ಹಿನ್ನೆಲೆಯಲ್ಲಿ ಈ ವರ್ಗಾವಣೆಯಾಗಿದ್ದು, ಮುಂದಿನ ದಿನಗಳಲ್ಲಿ ನೂತನ ಮುಖ್ಯಮಂತ್ರಿಗಳೊಂದಿಗೆ ಮಾತುಕತೆ ನಡೆಸಿ ನೌಕರರ ಬೇಡಿಕೆಗಳಾದ ಓಪಿಎಸ್, ಕೇಂದ್ರದ ಮಾದರಿ ವೇತನ ಸೇರಿದಂತೆ ಅನೇಕ ಬೇಡಿಕೆಗಳನ್ನು ಈಡೇರಿಸಿಕೊಳ್ಳುವಲ್ಲಿ ನಮ್ಮ ರಾಜ್ಯಾಧ್ಯಕ್ಷರು ಯಶಸ್ವಿಯಾಗುತ್ತಾರೆ ಎಂಬ ಮಾತುಗಳು ನೌಕರರ ವಲಯದಲ್ಲಿ ಕೇಳಿಬರುತ್ತಿದೆ.

Share This Article
";