ಶಿವಮೊಗ್ಗ, ಜು.22 : ಅನಾಮಧೇಯ ವ್ಯಕ್ತಿಯೋರ್ವ ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಎಸ್‌ಐಟಿ ತನಿಖೆಗೆ ಆದೇಶಿಸಿದೆ, ಎಸ್‌ಐಟಿ ತನಿಖೆ ನಿಷ್ಪಕ್ಷಪಾತವಾಗಿ ನಡೆಯಬೇಕು. ತಪ್ಪಿತಸ್ಥರಿಗೆ ಕಠಿಣಶಿಕ್ಷೆಯಾಗಬೇಕು ಎಂದು ವಕೀಲ ಕೆ.ಪಿ. ಶ್ರೀಪಾಲ್ ಆಗ್ರಹಿಸಿದರು.
ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,8 ವರ್ಷದಲ್ಲಿ ಬೆಳ್ತಂಗಡಿ ಮತ್ತು ಉಜಿರೆಯಲ್ಲಿ 98 ಪ್ರಕರಣ ಅಸಹಜ ಸಾವೆಂದು ವರದಿಯಾಗಿದೆ. ಹೂತಿಟ್ಟಿರುವ ನೂರಾರು ಶವಗಳಲ್ಲಿ 12 ರಿಂದ 15 ವರ್ಷದ ಹೆಣ್ಣು ಮಕ್ಕಳು, ಪುರುಷರು, ಮಹಿಳೆಯರು ಸೇರಿದ್ದಾರೆ ಎಂದು ಹೇಳಿಕೆ ನೀಡಿದ್ದಾನೆ.
ವ್ಯಕ್ತಿಯ ಹೇಳಿಕೆ ಹಾಗೂ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ದಾಖಲಾಗಿರುವ ದೂರುಗಳಲ್ಲಿ ವ್ಯತ್ಯಾಸ ಇರಬಹುದು. ಇಡೀ ಪ್ರಕರಣವನ್ನು ನ್ಯಾಯಸಮ್ಮತವಾಗಿ ತನಿಖೆ ಮಡಬೇಕೆಂಧರು.
ಅನಾಮಧೇಯ ವ್ಯಕ್ತಿಯೊಬ್ಬ 2014 ರ ವರೆಗೆ ನಾನು ಧರ್ಮಸ್ಥಳದಲ್ಲಿದ್ದೆ ಆ ಸಮಯದಲ್ಲಿ ನೂರಾರು ಶವಗಳನ್ನು ಹೂತಿದ್ದೇನೆ ಇವುಗಳಲ್ಲಿ ಅತ್ಯಾಚಾರ, ಕೊಲೆ, ದೌರ್ಜನ್ಯಸೇರಿವೆ.ಅದರ ಪಾಪಪ್ರಜ್ಞೆಯಿಂದಾಗಿ 2014 ರಲ್ಲಿ ಧರ್ಮಸ್ಥಳ ಬಿಟ್ಟು ಬೇರೆಡೆ ವಾಸವಾಗಿದ್ದೇನೆ ಎಂದು ಪೊಲೀಸರ ಎದುರು ನಂತರ ನ್ಯಾಯಾಲಯಕ್ಕೆ ಹಾಜರಾಗಿ ಹೇಳಿಕೆ ನೀಡಿಕೆ ನೀಡಿದ್ದು, ಈ ಪ್ರಕರಣಕ್ಕೆ ನ್ಯಾಯ ಒದಗಿಸಲು ರಾಜ್ಯ ಸರ್ಕಾರ ಎಸ್‌ಐಟಿಗೆ ವಹಿಸಿದೆ. ಎಸ್‌ಐಟಿಗೆ ಸಂಪೂರ್ಣ ಸ್ವಾತಂತ್ರ್ಯ ನೀಡಬೇಕು ಎಂದರು.
ಪ್ರಕರಣವು ದೇಶದ ಬೇರೆ ಬೇರೆ ರಾಜ್ಯಗಳಲ್ಲೂ ಸಹ ಪ್ರತಿಧ್ವನಿಸುತ್ತಿದೆ. ಕೇರಳ ಪೊಲೀಸರು ಈ ಪ್ರಕರಣವನ್ನು ದಾಖಲಿಸಿಕೊಂಡ ಒಂದು ತಿಂಗಳ ನಂತರ ಸರ್ಕಾರ ಎಸ್‌ಐಟಿ ತನಿಖೆಗೆ ಆದೇಶಿಸಿದೆ. ನಡೆದರೆ ಅನನ್ಯಭಟ್ ನಾಪತ್ತೆ ಪ್ರಕರಣ ಹಾಗೂ ಸೌಜನ್ಯ ಸಾವಿಗೆ ನ್ಯಾಯ ಸಿಗಲಿದೆ ಎಂಬ ವಿಶ್ವಾಸವಿದೆ ಎಂದರು.
ಸಮಾಜವಾದಿ ಪುಟ್ಟಯ್ಯ, ಎಂ. ಗುರುಮೂರ್ತಿ, ಕೆ.ಜಿ. ವೆಂಕಟೇಶ್, ಶಿವಬಸಪ್ಪ, ವಿಜಯ್ ಇತರರಿದ್ದರು.