ಶಿವಮೊಗ್ಗ,ಜ. 17 : ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪರವರು ಜ.18 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.
ಜ.18 ರಂದು ಬೆ.9.30ಕ್ಕೆ ಶಿವಮೊಗ್ಗಕ್ಕೆ ಆಗಮಿಸಲಿರುವ ಸಚಿವರು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆಯುವ ಭೂ ಸುರಕ್ಷಾ ಯೋಜನೆಯ ಜಿಲ್ಲಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಬೆ. 10.00 ಕ್ಕೆ ಶಿವಮೊಗ್ಗ ಜಿಲ್ಲಾ ಕಾಂಗ್ರೇಸ್ ಕಚೇರಿಯ ಸಭೆಯಲ್ಲಿ ಭಾಗವಹಿಲಿದ್ದಾರೆ.
ಮ.12.00ಕ್ಕೆ ಸಾಗರದ ಸಂತೆಮೈದಾನದಲ್ಲಿ ಏರ್ಪಡಿಸಿರುವ ಅಡಿಕೆ ಬೆಳೆಗಾರರ ಬೃಹತ್ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.