ಬೆಂಗಳೂರು,ನ.26 : ನಮ್ಮ ಪಕ್ಷದ ಶಾಸಕ ಗವಿಯಪ್ಪ ಅವರ ಈ ಹೇಳಿಕೆಯಿಂದ ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯ ಗಳಿಗೆ ಅನುದಾನವಿಲ್ಲ ಎಂದು ಆರೋಪ ಮಾಡ್ತಿದ್ದ ವಿರೋಧ ಪಕ್ಷದ ನಾಯಕರಿಗೆ ಆಹಾರವಾದಂತಾ ಗಿದ್ದು, ಈ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿ ಸಿದ್ದು, ಯಾವುದೇ ಕಾರಣಕ್ಕೂ ಗ್ಯಾರಂಟಿಗಳನ್ನು ನಿಲ್ಲಿಸುವುದಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು.
ಶಾಸಕ ಗವಿಯಪ್ಪ ಅವರು ಈ ರೀತಿ ಹೇಳಿಕೆ ನೀಡಬಾರದಿತ್ತು. ಅವರಿಗೆ ಪಕ್ಷದ ವತಿಯಿಂದ ಶೋಕಾಸ್ ನೋಟಿಸ್ ನೀಡುತ್ತೇವೆ. ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಪ್ರಶ್ನೆಯೇ ಇಲ್ಲ. ನಾವು ಕರ್ನಾಟಕದ ಜನತೆಗೆ ನೀಡಿದ್ದ ಮಾತಿಗೆ ಬದ್ಧರಾಗಿದ್ದೇವೆ ಎಂದರು.
ಯಾರೂ ಕೂಡ ಈ ಬಗ್ಗೆ ಚಕಾರ ಎತ್ತಬಾರದು. ಬಿಪಿಎಲ್ ಕಾರ್ಡ್ ವಿಚಾರವಾಗಿ ಅನ್ನಭಾಗ್ಯ ಯೋಜನೆಗೆ ಯಾರು ಅರ್ಹರಲ್ಲವೋ ಅವರನ್ನು ಪತ್ತೆ ಮಾಡಿ ತೆಗೆದು ಹಾಕುತ್ತೇವೆ. ಆದರೆ ಓರ್ವ ಕಾಂಗ್ರೆಸ್ ಶಾಸಕನಾಗಿ ಪಕ್ಷದ ಯೋಜನೆಗಳ ಬಗ್ಗೆ ನಕಾರಾತ್ಮಕವಾಗಿ ಮಾತನಾಡಬಾರದು ಎಂದು ಹೇಳಿದರು.