ಸಂಸದನಿಗೆ ಗಾಯ : ಚಿಕಿತ್ಸೆ ನೀಡಿದ ಡಾ|| ಮಂಜುನಾಥ್

Kranti Deepa

ನವದೆಹಲಿ,ಡಿ.19 : ಸಂವಿಧಾನ ಶಿಲ್ಪಿ  ಡಾ. ಬಿ.ಆರ್ ಅಂಬೇಡ್ಕರ್ ಅವರ ವಿಚಾರವಾಗಿ ಸಂಸತ್ ಭವನದ ಆವರಣದಲ್ಲಿ ದೊಡ್ಡ ಹೈಡ್ರಾಮಾವೇ ನಡೆದಿದ್ದು, ಪ್ರತಿಭಟನೆ ವೇಳೆ ಉಂಟಾದ ತಳ್ಳಾಟದಲ್ಲಿ ಬಿಜೆಪಿ ಸಂಸದರಿಬ್ಬರು ಗಾಯಗೊಂಡಾಗ ಅವರಿಗೆ ಕರ್ನಾಟಕದ ಸಂಸದ ಡಾ.ಮಂಜುನಾಥ್ ಚಿಕಿತ್ಸೆ ನೀಡಿದರು.

ಹೌದು.. ಅಂಬೇಡ್ಕರ್ ಅವರನ್ನು ಅವಮಾನಿಸಿರುವ ಪ್ರತಿಪಕ್ಷ ಕಾಂಗ್ರೆಸ್ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿ ಘೋಷಣೆಗಳನ್ನು ಕೂಗುತ್ತ, ಫಲಕಗಳನ್ನು ಹಿಡಿದು ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟದ ಸಂಸದರು ಸಂಸತ್ತಿನ ಆವರಣದೊಳಗೆ ಪ್ರತಿಭಟಿಸಿದರು.

Share This Article
";