ಬೆಂಗಳೂರು, ಅ.06 : ಸಿಎಂ ಸಿದ್ದರಾಮಯ್ಯ ಅವರು ಇನ್ನು ಮುಂದೆ ಇವಿ ಕಾರಿನಲ್ಲಿ ಸಂಚರಿಸಲಿದ್ದಾರೆ. ಬೆಂಗಳೂರಿನಲ್ಲಿ ಸಂಚಾರ ನಡೆಸಲು ಪರಿಸರ ಸ್ನೇಹಿ ಇವಿ ಕಾರು ನೀಡಲು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ತೀರ್ಮಾನಿಸಿದೆ.
ಬೆಂಗಳೂರಲ್ಲಿ ಸಿಎಂ ಸಿದ್ದರಾಮಯ್ಯಗೆ ಓಡಾಡಲು ಹೊಸ ಮಾಡೆಲ್ ಎಲೆಕ್ಟ್ರಿಕ್ ವಾಹನವನ್ನು ನೀಡಲು ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ನರೇಂದ್ರ ಸ್ವಾಮಿ ನಿರ್ಧಾರ ಮಾಡಿದ್ದಾರೆ. ವಿಧಾನಸೌಧದಲ್ಲಿ ನಡೆದ ಇವಿ ಕಾರುಗಳ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ನರೇಂದ್ರ ಸ್ವಾಮಿ ಈ ಘೋಷಣೆ ಮಾಡಿದರು. ಇದರ ಜೊತೆಗೆ ಅರಣ್ಯ ಸಚಿವ ಈಶ್ವರ್ ಖಂಡ್ರೆಗೂ ಇವಿ ಕಾರು ನೀಡಲು ಮುಂದಾಗಿದ್ದಾರೆ.
ಬೆಂಗಳೂರಿನಲ್ಲಿ ಮಾಲಿನ್ಯ ನಿಯಂತ್ರಣ ಮಾಡುವ ನಿಟ್ಟಿನಲ್ಲಿ ಜಾಗೃತಿ ಮೂಡಿಸುವ ಸಂಬಂಧ ಇದೊಂದು ಸಾಂಕೇತಿಕ ಹೆಜ್ಜೆಯಾಗಿದೆ. ಸಿಎಂ ಸಿದ್ದರಾಮಯ್ಯ ಹಾಗೂ ಅರಣ್ಯ ಸಚಿವರಿಗೆ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಇವಿ ಕಾರು ನೀಡುವ ಮೂಲಕ ಎಲೆಕ್ಟ್ರಿಕ್ ಕಾರು ಬಳಕೆಗೆ ಪ್ರೋತ್ಸಾಹಿಸುವ ಉದ್ದೇಶ ಹೊಂದಲಾಗಿದೆ.