ಮುಂಬೈ,ಡಿ.05 : ವಿಧಾನಸಭೆ ಚುನಾವಣೆಯ ಫಲಿತಾಂಶ ಪ್ರಕಟವಾಗಿ ಸುಮಾರು ಎರಡು ವಾರಗಳ ನಂತರ ಮಹಾರಾಷ್ಟ್ರ ನೂತನ ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವೀಸ್ ಅವರು ಗುರುವಾರ ಪ್ರಮಾಣವಚನ ಸ್ವೀಕರಿಸಿದರು.
ಇಂದು ಸಂಜೆ 5-30 ಕ್ಕೆ ದಕ್ಷಿಣ ಮುಂಬೈನ ಆಜಾದ್ ಮೈದಾನದಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ರಾಜ್ಯಪಾಲ ಸಿ ಪಿ ರಾಧಾಕೃಷ್ಣನ್ ಅವರು ದೇವೇಂದ್ರ ಫಡ್ನವಿಸ್ ಅವರಿಗೆ ಪ್ರತಿಜ್ಞಾವಿ ಬೋಸಿದರು. ನಂತರ ಉಪ ಮುಖ್ಯಮಂತ್ರಿಗಳಾಗಿ ಏಕನಾಥ್ ಶಿಂಧೆ ಹಾಗೂ ಅಜಿತ್ ಪವಾರ್ ಅವರು ಪ್ರಮಾಣವಚನ ಸ್ವೀಕರಿಸಿದರು.
ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಎನ್‌ಡಿಎ ಆಡಳಿತವಿರುವ ರಾಜ್ಯಗಳ ಸಿಎಂಗಳು ಹಾಗೂ ಉಪ ಮುಖ್ಯಮಂತ್ರಿಗಳು, ಕೇಂದ್ರ ಸಚಿವರು, ಎನ್‌ಡಿಎ ನಾಯಕರು ಸೇರಿದಂತೆ ಹಲವು ನಾಯಕರು ಭಾಗವಹಿಸಿದ್ದರು.