ಫೆಂಗಲ್ ಎಫೆಕ್ಟ್ : ರಾಜ್ಯದಲ್ಲಿ ಎರಡು ದಿನ ಭಾರೀ ಮಳೆ

Kranti Deepa

ಬೆಂಗಳೂರು,ಡಿ.2 : ಫೆಂಗಲ್ ಚಂಡಮಾರುತದ ಎಫೆಕ್ಟ್ ಇನ್ನಷ್ಟು ಹೆಚ್ಚಾಗಲಿದೆ. ಬಂಗಾಳ ಕೊಲ್ಲಿ ಯಿಂದ ಅರಬ್ಬಿ ಸಮುದ್ರದತ್ತ ಚಂಡ ಮಾರುತ ಪಥ ಬದಲಿಸಿದ್ದು ಬೆಂಗಳೂರು ಮತ್ತು ಕರ್ನಾಟಕದ ಇತರ ಭಾಗಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಬೆಂಗಳೂರಿನಲ್ಲಿ ನಿರಂತರವಾಗಿ ಮಳೆಯಾ ಗುತ್ತಿದೆ. ಕರಾವಳಿ ಕರ್ನಾ ಟಕ ಮತ್ತು ದಕ್ಷಿಣ ಆಂತರಿಕ ಕರ್ನಾಟಕದ ಕೆಲವು ಭಾಗಗಳಲ್ಲಿ ಇಂದು ಬಾರಿ ಮಳೆಯಾಗಲಿದ್ದು ಮಂಗಳವಾರ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದರೆ, ಈ ಪ್ರದೇಶಗಳಲ್ಲಿ ಬುಧವಾರದಿಂದ ಮಳೆ ಕಡಿಮೆ ಯಾಗುವ ಸಾಧ್ಯತೆಯಿದೆ ಎಂದು ಅಕಾರಿಗಳು ತಿಳಿಸಿದ್ದಾರೆ.

ಬೆಂಗಳೂರು ಮತ್ತು ಹಾಸನ, ಮಂಡ್ಯ ಮತ್ತು ರಾಮನಗರ ಜಿಲ್ಲೆಗಳಿಗೆ ಸೋಮವಾರ ಹಳದಿ ಅಲರ್ಟ್ ಘೋಷಿಸಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ, ಬೆಂಗಳೂರು ನಿರ್ದೇಶಕ ಸಿಎಸ್ ಪಾಟೀಲ್ ತಿಳಿಸಿದ್ದಾರೆ. ಫೆಂಗಲ್ ಪ್ರಭಾವದಿಂದ ಬೆಂಗಳೂರು ಮತ್ತು ಕರ್ನಾಟಕದ ಇತರ ಭಾಗಗಳಲ್ಲಿ ಭಾನುವಾರದಿಂದ ವ್ಯಾಪಕ ಮಳೆಯಾಗಿದೆ ಎಂದು ಅವರು ಹೇಳಿದರು.

ಐಎಂಡಿ ಅಕಾರಿಗಳ ಪ್ರಕಾರ, ಉಡುಪಿ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗುವ ನಿರೀಕ್ಷೆ ಇದ್ದು ಆರೆಂಜ್ ಅಲರ್ಟ್ ಘೋಷಿಸಿದೆ.

ಮಂಗಳೂರು ಸೇರಿದಂತೆ ರಾಮನಗರ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

Share This Article
";