ಆರ್‌ಸಿಬಿ ವಿರುದ್ಧ ಎಫ್ಐಆರ್ 

Kranti Deepa
ಬೆಂಗಳೂರು,ಜೂ.05: ಮೊದಲ ಬಾರಿ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸಂಭ್ರಮಾಚರಣೆ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತ ಸಂಭವಿಸಿ 11 ಜನ ಮೃತಪಟ್ಟಿದ್ದು, ಘಟನೆಗೆ ಸಂಬಂಸಿದಂತೆ ಗುರುವಾರ ಆರ್‌ಸಿಬಿ, ಕೆಎಸ್‌ಸಿಎ ಹಾಗೂ ಈವೆಂಟ್ ಮ್ಯಾನೇಜ್‌ಮೆಂಟ್ ಕಂಪನಿ ವಿರುದ್ಧ  ಎಫ್ಐಆರ್  ದಾಖಲಿಸಲಾಗಿದೆ.
ಕಾಲ್ತುಳಿತ ಪ್ರಕರಣಕ್ಕೆ ಸಂಬಂಸಿದಂತೆ ಆರ್‌ಸಿಬಿ, ಈವೆಂಟ್ ಮ್ಯಾನೇಜ್‌ಮೆಂಟ್ ಸಂಸ್ಥೆ ಡಿಎನ್‌ಎ  ಎಂಟರ್‌ಟೈನ್‌ಮೆಂಟ್  ನೆಟ್‌ವರ್ಕ್, ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್(ಕೆಎಸ್ ಸಿಎ) ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪೊಲೀಸ್ ಇನ್ಸ್‌ಪೆಕ್ಟರ್ ನೀಡಿದ ದೂರಿನ ಆಧಾರದ ಮೇಲೆ, ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಅವರು ಹೇಳಿದ್ದಾರೆ.

Share This Article
";