ಇನ್ನುಮುಂದೆ ಚುನಾವಣೆಗೆ ಸ್ಪರ್ಧಿಸುವುದಿಲ್ಲ: ಗೀತಾ ಶಿವರಾಜ್‌ಕುಮಾರ್

Kranti Deepa

ಶಿವಮೊಗ್ಗ,ಸೆ .27  : ಶಿವಮೊಗ್ಗದಲ್ಲಿಯೇ ನಾನಿನ್ನು ಚುನಾವಣೆಗೆ ಸ್ಪರ್ಧಿಸುವುದಿಲ್ಲ.  ಆದರೆ ಪಕ್ಷದ ಎಲ್ಲರ ಜೊತೆಗೂ ದೃಢವಾಗಿ ಇರುತ್ತೇನೆ ಎಂದು  ಗೀತಾ ಶಿವರಾಜ್‌ಕುಮಾರ್ ಹೇಳಿದರು.

ಶನಿವಾರ ಮಹಿಳಾ ಕಾಂಗ್ರ್ರೆಸ್ ಸಮಾರಂಭಧಲ್ಲಿ ಮಾತನಾಡಿದ ಅವರು, ಚುನಾವಣೆಗೆ ಈ ಹಿಂದೆ ಸ್ಪರ್ಧಿಸಿದ್ದರೂ ಕೂಡ ಪಕ್ಷ ಸಂಘಟನೆಯಲ್ಲಿ ಜೊತೆಗೆ ಇರುತ್ತೇನೆ, ನಿಮ್ಮೊಂದಿಗೆ ಕೆಲಸ ಮಾಡುತ್ತೇನೆ, ಯಾವಾಗ ಕರೆದರೂ ನಾನು ಬರುತ್ತೇನೆ ಎಂದು ತಿಳಿಸಿದರು.

ನೂತನ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಶ್ವೇತಾ ಬಂಡಿಯವರನ್ನು ಅಭಿನಂದಿಸಿದ ಅವರು, ಶ್ವೇತಾ ತಮ್ಮ ಚುನಾವಣೆಯ ಪ್ರಚಾರದಲ್ಲಿ ಶ್ರಮಿಸಿದ್ದಾರೆ. ಇಂದಿನ ಸಮಾವೇಶ ಖುಷಿ ತಂದಿದೆ. ಮಹಿಳೆಯರು ಅಬಲೆಯರಲ್ಲ. ಅವರಿಗೆ ಎಲ್ಲಾ ಶಕ್ತಿಯಿದೆ ಅವರು  ಎಲ್ಲರನ್ನೂ ಜೊತೆಗೂಡಿಸಿಕೊಂಡು ಅವರು ಪಕ್ಷ ಸಂಘಟಿಸಲಿ ಎಂದು ಸಲಹೆ ನೀಡಿದರು. ನಾನು ಇನ್ಮುಂದೆ ಯಾವುದೇ ಚುನಾವಣೆಗೆ ಸ್ಪರ್ಧಿಸುವುದಿಲ್ಲ, ಆದರೆ ಪಕ್ಷದ ಎಲ್ಲರ ಜೊತೆಗೂ ದೃಢವಾಗಿ ಇರುತ್ತೇನೆ ಎಂದು ಪುನರುಚ್ಚರಿಸಿದರು.

Share This Article
";