ಬೆಂಗಳೂರು,ಜೂ.04 : ಕೊನೆಗೂ 18 ವರ್ಷಗಳ ಕಾಯುವಿಕೆಯ ನಂತರ ಮೊದಲ ಬಾರಿ ಐಪಿಎಲ್ ಚಾಂಪಿಯನ್ಸ್ ಆಗಿ ಬೆಂಗಳೂರಿಗೆ ಆಗಮಿಸಿದ ಬೆಂಗಳೂರು ರಾಯಲ್ ಚಾಲೆಂಜರ್ಸ್ ತಂಡವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಬುಧವಾರ ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ ಸನ್ಮಾನಿಸಿದರು.
ಗುಜರಾತ್‌ನ ಅಹ್ಮದಾಬಾದ್‌ನಿಂದ ಬೆಂಗಳೂರಿನ ಎಚ್ ಎ ಎಲ್ ವಿಮಾನ ನಿಲ್ದಾಣಕ್ಕೆ ಬಂದಿಳಿದ ಆರ್‌ಸಿಬಿ ಆಟಗಾರರನ್ನು ಸರ್ಕಾರದ ಪರವಾಗಿ ಖುದ್ದು ಡಿಸಿಎಂ ಡಿಕೆ ಶಿವಕುಮಾರ್ ಸ್ವಾಗತಿಸಿದರು. ನಂತರ ಆರ್‌ಸಿಬಿ ಆಟಗಾರರನ್ನು ವಿಶೇಷ ಬಸ್ಸುಗಳಲ್ಲಿ ಖಾಸಗಿ ಹೋಟೆಲ್ ಗೆ ಕರೆದುಕೊಂಡು ಹೋಗಲಾಯಿತು.
ಸಂಜೆ 4:30 ಕ್ಕೆ ಖಾಸಗಿ ಹೋಟೆಲ್‌ನಿಂದ ಬಸ್‌ಗಳಲ್ಲಿ ಆರ್‌ಸಿಬಿ ತಂಡ ಗೆದ್ದ ಟ್ರೋಫಿ ಸಮೇತ ವಿಧಾನಸೌಧಕ್ಕೆ ಆಗಮಿಸಿತು. ರಾಷ್ಟ್ರಗೀತೆ ಹಾಗೂ ನಾಡಗೀತೆ ಮೂಲಕ ಕಾರ್ಯಕ್ರಮ ಆರಂಭಿಸಲಾಯಿತು. ಬಳಿಕ ಸಿಎಂ ಸಿದ್ದರಾಮಯ್ಯ ಅವರು ಎಲ್ಲಾ ಆಟಗಾರರಿಗೆ ಮೈಸೂರು ಪೇಟ ತೊಡಿಸಿ, ಶಾಲು ಹೊದಿಸಿ, ಹಾರ ಹಾಕಿ ಸನ್ಮಾನಿಸಿದರು. ಅಷ್ಟರಲ್ಲೇ ಮಳೆ ಬಂದ ಕಾರಣ ತರಾತುರಿಯಲ್ಲಿ ಕಾರ್ಯಕ್ರಮ ಮುಗಿಸಿ ಆಟಗಾರರನ್ನು ಬಸ್‌ನಲ್ಲಿ ಕಳುಹಿಸಲಾಯಿತು.