ಶಿವಮೊಗ್ಗ ಫೆ.12 : ಶಿವಮೊಗ್ಗದ ಮುದ್ದಿನಕೊಪ್ಪ ಗ್ರಾಮ ಪಂಚಾಯಿತಿ ಅಧ್ಯಕ್ಷ ಪಿಡಿಓ ನಿಂದ ಆದ ಅವಮಾನ ಸಂಬಂಧ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ವರದಿಯಾಗಿದೆ.
ಪಿಡಿಒ ವಿರುದ್ಧ ಆರೋಪಿಸಿ ಗ್ರಾಪಂ ಅಧ್ಯಕ್ಷ ರಘು ಎಂಬುವರು ಆತ್ಮಹತ್ಯೆಗೆ ಯತ್ನಿಸಿದ್ದು ಅವರನ್ನ ಮೆಗ್ಗಾನ್ ಗೆ ದಾಖಲಿಸಿರುವುದಾಗಿ ತಿಳಿದು ಬಂದಿದೆ.
ಜಮೀನಿನ ವಿಚಾರದಲ್ಲಿ ತಮ್ಮನ್ನು ಭೇಟಿ ಮಾಡಲು ಗ್ರಾಮಸರು ಬಂದಾಗ ಪಿಡಿಒಗೆ ಬರಹೇಳಿದರೂ ಬಂದಿರಲಿಲ್ಲ. ಪಿಡಿಒರಿಂದ ಅವಮಾನಕ್ಕೊಳಗಾಗಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವುದಾಗಿ ಹೇಳಲಾಗುತ್ತಿದೆ.
ಕುಂಸಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.