ಶಿವಮೊಗ್ಗ ,ಜ.25 : ಬಿಜೆಪಿ ಸರ್ಕಾರದ ಅವಧಿಯಲ್ಲೇ ಶರಾವತಿ ಪಂಪ್ ಶರಾವತಿ ಪಂಪ್ ಸ್ಟೋರೇಜ್‌ಗೆ ಪ್ರಸ್ತಾವನೆಯಾಗಿದೆ.
ಈಗ ಪರಿಸರಕ್ಕೆ ಈ ಯೋಜನೆಯಿಂದ ಹಾನಿಯಾಗುತ್ತದೆ ಎಂದು ಬಿಜೆಪಿಯವರು ಬಾಯಿ ಬಡಿದುಕೊಳ್ಳುತ್ತಿದ್ದಾರೆ. ಆಗ ಇವರೆಲ್ಲ ಎಲ್ಲಿ ಹೋಗಿದ್ದರು ಎಂದು ಸಚಿವ ಮಧು ಬಂಗಾರಪ್ಪ ವಾಗ್ದಾಳಿ ನಡೆಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮೈಕ್ರೋ ಫೈನಾನ್ಸ್ ಪ್ರಕರಣ ಕೇವಲ ನಮ್ಮ ಜಿಲ್ಲೆಗಷ್ಟೇ ಸೀಮಿತವಾಗಿಲ್ಲ, ಇದು ಇಡೀ ರಾಜ್ಯಕ್ಕೆ ವ್ಯಾಪಿಸಿದ ಪ್ರಕರಣವಾಗಿದೆ.
ಈ ವಿಷಯಕ್ಕೆ ಸಂಬಂಧಿಸಿ ದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉನ್ನತ ಮಟ್ಟದ ಸಭೆ ಕರೆದಿದ್ದಾರೆ. ಮೈಕ್ರೋ ಫೈನಾನ್ಸ್ ನಿಂದ ಕಿರುಕುಳಕ್ಕೊಳಗಾದ ಸಂತ್ರಸ್ತರ ಬೆನ್ನಿಗೆ ಸರ್ಕಾರ ಇದೆ ಎಂದರು.
ಶಿವಮೊಗ್ಗ ಜಿಲ್ಲೆಯಲ್ಲೂ ಈ ಕುರಿತ ಕೆಲ ಪ್ರಕರಣಗಳು ದಾಖಲಾಗಿವೆ ಎಂಬ ಮಾಹಿತಿ ಬಂದಿದೆ. ಅವುಗಳ ಬಗ್ಗೆ ಪರಿಶೀಲಿಸಲಾಗುವುದೆಂದು ಹೇಳಿದರು.
ಅರಣ್ಯ ಸಮಸ್ಯೆ ಗಳ ಪರಿಹಾರಕ್ಕೆ ಬಿ.ವೈ.ರಾಘವೇಂದ್ರ ಶ್ರಮಿಸುತ್ತಿದ್ದಾರೆ ಎಂದು ಮಾಜಿ ಸಚಿವ ಹರತಾಳು ಹಾಲಪ್ಪ ಹೇಳುತ್ತಿದ್ದಾರೆ ಎಂಬ ಪ್ರಶ್ನೆಗೆ ಸಿಡಿಮಿಡಿಗೊಂಡ ಮಧು, ಹಾಲಪ್ಪ ಆಗ ಸಗಣಿ ತಿನ್ನುತ್ತಿದ್ದರೆ ಅವರದ್ದೇ ಸರ್ಕಾರವಿದ್ದಾಗ ಬಗೆಹರಿಸ ಬಹುದಿತ್ತಲ್ಲ? ಆಗ ಅವರು ಬಾಯಿಗೆ ಬೀಗ ಹಾಕಿಕೊಂಡಿದ್ದರಾ ಎಂದು ಖಾರವಾಗಿ ಪ್ರಶ್ನಿಸಿದರು.