ಹೆಚ್‌ಡಿಕೆ ಪುತ್ರನಿಗೆ ಜೆಡಿಎಸ್ ರಾಜ್ಯಾಧ್ಯಕ್ಷ ಹುದ್ದೆ : ದೇವೇಗೌಡ

Kranti Deepa

ಬೆಂಗಳೂರು,ಡಿ.08 : ಇತ್ತೀಚೆಗಷ್ಟೇ ಚನ್ನಪಟ್ಟಣ ವಿಧಾನಸಭಾ ಉಪಚುನಾವಣೆಯಲ್ಲಿ ಸೋತಿರುವ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರ ಸ್ವಾಮಿ ಅವರು ೨೦೨೫ರಲ್ಲಿ ನಡೆಯಲಿರುವ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣೆಯಿಂದ ಕರ್ನಾಟಕದಲ್ಲಿ ಮುಂದಿನ ದಿನಗಳಲ್ಲಿ ಪ್ರಾದೇಶಿಕ ಪಕ್ಷವನ್ನು ಮುನ್ನಡೆಸುವ ಸಾಧ್ಯತೆ ಇದೆ.

ಚನ್ನಪಟ್ಟಣದಲ್ಲಿ ನಿಖಿಲ್ ಸತತ ಮೂರನೇ ಸೋಲು ಕಂಡಿದ್ದಾರೆ. ಸದ್ಯ ಕುಮಾರಸ್ವಾಮಿ ರಾಜ್ಯ ಜೆಡಿಎಸ್ ಅಧ್ಯಕ್ಷರಾಗಿದ್ದಾರೆ. ಈಗ ಕುಮಾರಸ್ವಾಮಿ ಕೇಂದ್ರ ಸಚಿವರಾಗಿರುವ ಕಾರಣ ನಿಖಿಲ್‌ಗೆ ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನ ಹಸ್ತಾಂತರವಾಗುವ ಸಾಧ್ಯತೆಯಿದೆ ಎಂದು ಬಲ್ಲ ಮೂಲಗಳು ತಿಳಿಸಿವೆ.

Share This Article
";